ಜೀಲ್ಲಾ ಸುದ್ದಿಗಳು
ಬೀದರ್ .ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಬಂಡೆಪ್ಪ ಖಾಶೆಂಪೂರ್ ಅವರು ನಿರ್ಣ ಗ್ರಾಮದಲ್ಲಿ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಹೋಬಳಿ ಮಟ್ಟದ ಅಧಿಕಾರಿಗಳೊಂದಿಗೆ ಇತ್ತೀಚೆಗೆ ಸಭೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ವಹಿಸುವುದರಿಂದ ಕರೋನಾ ಹರಡುವುದನ್ನು ತಡೆಯಬಹುದಾಗಿದೆ ಎಂದು ಅವರು ತಿಳಿಸಿದರು.
ಅಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಬೇಕು. ಕಡುಬಡವರಿಗೆ ಆಹಾರಧಾನ್ಯಗಳ ಪೂರೈಕೆಗೆ ಮತ್ತು ಹಳ್ಳಿಗಳಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆಗೆ ಗಮನ ಕೊಡಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದರು. ಸಿಪಿಐ ಶರಣಬಸಪ್ಪ ಭಜಂತ್ರಿ, ಮನ್ನಾಏಖೆಳ್ಳಿ ಪಿಎಸ್‌ಐ ಮತ್ತು ಪಿಡಿಓ ಹಾಗೂ ಇತರರು ಇದ್ದರು.
Be the first to comment