ಜಿಲ್ಲೆಯಾದ್ಯಂತ ತಂಬಾಕು ಮಾರಾಟ ನಿಷೇಧ

ಜೀಲ್ಲಾ ಸುದ್ದಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯಾದ್ಯಂತ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಮಾನ್ಯ ಜಿಲ್ಲಾಧಿಕಾರಿಗಳಾದ ಆರ್.ಲತಾ ರವರು ತಿಳಿಸದ್ದಾರೆ.

ಕೊರೋನಾ ವೈರಸ್ ಸೋಂಕಿತರು ಜಗಿಯುವ ತಂಬಾಕು ಮತ್ತು ತಂಬಾಕು ಉತ್ಪನ್ನಗಳನ್ನು ಬಳಸಿ ಉಗುಳುವುದರಿಂದ ಒಬ್ಬರಿಂದ ಇನ್ನೊಬ್ಬರಿಗೆ ರೋಗ ಹರಡುವ ಭೀತಿ ಇರುತ್ತದೆ. ಆದ್ದರಿಂದ ಸಾರ್ವಜನಿಕರ ಆರೋಗ್ಯ ಹಿತ ದೃಷ್ಟಿಯಿಂದ ಕೋವಿಡ್-19 ಹತೋಟಿಗೆ ಬರುವವರೆಗೂ ತಂಬಾಕು ಹಾಗೂ ತಂಬಾಕು ಉತ್ಪನ್ನಗಳನ್ನು “ಜಿಲ್ಲೆಯಾದ್ಯಂತ ಅಂಗಡಿಗಳಲ್ಲಿ ಮಾರಾಟ ಮಾಡುವುದು ಮತ್ತು ಸಾರ್ವಜನಿಕರು ಬಳಸುವುದನ್ನು ನಿಷೇಧಿಸಲಾಗಿದೆ.” ಒಂದು ವೇಳೆ ಉಲ್ಲಂಘನೆಯಾದಲ್ಲಿ ಸಾಂಕ್ರಾಮಿಕ ರೋಗಗಳ ಕಾಯ್ದೆ-1897, ವಿಪತ್ತು ನಿರ್ವಹಣಾ ಕಾಯ್ದೆ-2005, ಐಪಿಸಿ-1960, ಸಿ.ಆರ್.ಪಿ.ಸಿ.ಅಡಿಯಲ್ಲಿ ಪ್ರಕರಣ ದಾಖಲಿಸಿ ಸಂಬಂಧಿಸಿದವರ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Be the first to comment

Leave a Reply

Your email address will not be published.


*