ಜೀಲ್ಲಾ ಸುದ್ದಿಗಳು
ಸಾಗರ:-ಸದ್ಯ ದೇಶಾದ್ಯಂತ ಕರೋನಾ ವೈರಸ್ ನಿಯಂತ್ರಣಕ್ಕಾಗಿ ಲಾಕ್ ಡಾನ್ನನ್ನು ಘೋಷಣೆ ಮಾಡಲಾಗಿದೆ .
ಲಾಕ್ ಡೌನ್ ನಿಂದ ಜನರು ಕೆಲಸವಿಲ್ಲದೇ ಹಸಿವಿನಿಂದ ಸಾಯಬಾರದು ಎಂಬ ಸದುದ್ದೇಶದಿಂದ ರಾಜ್ಯ ಸರ್ಕಾರವು ಪ್ರತಿ ಕುಟುಂಬದ ಪ್ರತಿ ಸದಸ್ಯನಿಗೆ ಎರಡು ತಿಂಗಳ ಮುಂಗಡವಾಗಿ ಪಡಿತರ ವ್ಯವಸ್ಥೆಯನ್ನು ಸಂಬಂಧಿಸಿದ ನ್ಯಾಯಬೆಲೆ ಅಂಗಡಿ ಮೂಲಕ ನೀಡಿದ್ದಾರೆ .
ಈ ಲಾಕ್ ಟೈಮ್ ಸಂದರ್ಭದಲ್ಲಿ ಕಾರ್ಮಿಕರಿಗೆ ಯಾವುದೇ ಕೆಲಸವನ್ನು ನೀಡದರೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಸಂಬಂಧಿಸಿದ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ರಾಜ್ಯ ಸರಕಾರವು ಸ್ಪಷ್ಟವಾದ ನಿರ್ದೇಶನವನ್ನು ನೀಡಿದೆ .
ಇಂಥ ಲಾಕ್ ಡೌನ್ ಸಂದರ್ಭದಲ್ಲಿ ಸಾಗರ ತಾಲ್ಲೂಕಿನ ತ್ಯಾಗರ್ತಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ಮಂಜು ನಾಯಕ್ ಇವರು ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಇಂದು ಮುಂಜಾಗೃತೆ ಅಗತ್ಯ ಕ್ರಮವನ್ನು ತೆಗೆದುಕೊಳ್ಳದೆ ಉದ್ಯೋಗ ಖಾತ್ರಿ ಕೆಲಸವನ್ನು ಪ್ರಾರಂಭಿಸಿದ್ದಾರೆ .?
ಜನರು ಕೆಲಸ ಸಿಗುತ್ತದೆ ಎಂಬ ಆಸೆಯಿಂದ ಉದ್ಯೋಗ ಖಾತ್ರಿಯ ಕೆಲಸಕ್ಕೆ ಹೋಗಿದ್ದ ಕಾರ್ಮಿಕ ಉಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ .
ದೇಶಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದರೂ ತ್ಯಾಗರ್ತಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗತ್ಯ ಮುಂಜಾಗೃತ ಕ್ರಮ ತೆಗೆದುಕೊಂಡು , ಹಾಗೂ ಜನರಲ್ಲಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕೆಲಸ ಮಾಡುವಂತೆ ಸೂಚನೆ ನೀಡಿದೆ ಹಠ ಸಾಧಿಸಿ ಇಂದು ಉದ್ಯೋಗ ಖಾತ್ರಿ ಕೆಲಸ ಪ್ರಾರಂಭಿಸಿದ್ದಾರೆ ಎಂದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಆರೋಪಿಸಿದ್ದಾರೆ .
ಕೆಲಸ ಪ್ರಾರಂಭಿಸುವ ಸಂದರ್ಭದಲ್ಲಿ ಗಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ಥಳದಲ್ಲೇ ಇರಬೇಕು. ಅವರಿಗೆ ಊಟ ಉಪಚಾರದ ವ್ಯವಸ್ಥೆ ಮಾಡಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕೆಲಸ ಮಾಡಬೇಕು ಎಂಬ ನಿರ್ದೇಶನವನ್ನು ನೀಡಬೇಕಾಗಿತ್ತು .ಆದರೆ ಅವರು ವಿಳಂಬವಾಗಿ ಆಗಮಿಸಿದ್ದ ಪರಿಣಾಮ ಇಂದು ಈ ಘಟನೆ ನಡೆಯಲು ಕಾರಣವಾಗಿದ್ದಾರೆ .
ದೇಶಾದ್ಯಂತ ಕರೋನಾ ಲಾಕ್ ಟೌನ್ ಜಾರಿಯಲ್ಲಿದ್ದರೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕಾರ್ಯಕ್ಷೇತ್ರದಲ್ಲಿ ವಾಸ ಇದ್ದು ಮುಂಜಾಗೃತ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು .ಆದರೆ ಇವರು ತಮ್ಮ ಕಾರ್ಯಕ್ಷೇತ್ರದಲ್ಲಿ ಇರದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪವೂ ಇವರ ಮೇಲೆ ಇದೆ .
ಕೆಲಸದ ಸ್ಥಳದಲ್ಲಿ ಸೂಕ್ತ ಪ್ರಥಮ ಚಿಕಿತ್ಸೆ ವ್ಯವಸ್ಥೆಯನ್ನೂ ಮಾಡಿರಲಿಲ್ಲ .
ಬಡವರ ಜೀವಕ್ಕೆ ಬೆಲೆ ಇಲ್ಲವೇ? ಮೃತ ಕಾರ್ಮಿಕ ಉಮೇಶ್ ಇವನ ಸಾವಿಗೆ ಜವಾಬ್ದಾರರು ಯಾರು .
ಜಿಲ್ಲಾಧಿಕಾರಿಗಳು ಬಂದು ಪಿಡಿಒ ಇವರ ಮೇಲೆ ಕಾನೂನು ರೀತಿ ಕ್ರಮ ತೆಗೆದುಕೊಳ್ಳುವವರೆಗೂ ಶವವನ್ನು ತೆಗೆದುಕೊಂಡು ಹೋಗುವುದಿಲ್ಲ ಎಂದು ಸಂಬಂಧಿಕರು ಹಾಗೂ ಗ್ರಾಮಸ್ಥರು ಬಿಗಿ ಪಟ್ಟು ಹಿಡಿದು ಪ್ರತಿಭಟನೆ ನಡೆಸುತ್ತಿದ್ದಾರೆ .
ತ್ಯಾಗರ್ತಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಯಿಂದ ಇಂದು ಬಡ ಕಾರ್ಮಿಕ ಒಬ್ಬನ ಸಾವು ಸಂಭವಿಸಿದೆ .ಇವರ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿ ತನಕ್ಕೆ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ ಕಾದು ನೋಡಬೇಕಾಗಿದೆ.
Be the first to comment