ಜೀಲ್ಲಾ ಸುದ್ದಿಗಳು
ಅಂಬಿಗ ನ್ಯೂಸ್ ಸುರಪುರ
ಸುರಪುರ ತಾಲ್ಲೂಕಿನ ವಾಗಣಗೇರಾ ಗ್ರಾಮದ ಜನತೆ ಕುಡಿಯುವ ನೀರಿಗಾಗಿ ಹಗಲಿರುಳು ಗುಂಪು ಗುಂಪಾಗಿ ನಿಂತು ಕಾಯಬೇಕಾದ ಪರೀಸ್ಥಿತಿ ಬಂದೊದಗಿದೆ .
ಇದರಿಂದ ಲಾಕ್‌ಡೌನ್ ನಿಯಮ ಗಾಳಿಗೆ ತೂರಿದಂತಾಗಿದೆ. ಸರಕಾರ ಮೊದಲು ಈ ಗ್ರಾಮದ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ಸುರಪುರ: ತಾಲೂಕಿನ ವಾಗಣಗೇರಾ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಹಗಲಿರುಳು ನೀರಿಗಾಗಿ ಕಾಯುವ ಪರಿಸ್ಥಿತಿ ಬಂದಿದ್ದು, ಜನರು ಹೈರಾಣಾಗಿ ಹೋಗಿದ್ದಾರೆ.
ಬೇಸಿಗೆಯದಿನವಾಗಿದ್ದರಿಂದ ಕುಡಿಯುವ ನೀರಿನ ಸಮಸ್ಯೆ ತಲೆದೂರಿ ಗ್ರಾಮದ ಜನತೆ ನಿತ್ಯವೂ ಗಂಟೆಗಟ್ಟಲೆ ಕಾದು ತಾಲೂಕು ಆಡಳಿತಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ.
ವಾಗಣಗೇರಾ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿಂದಿನಿಂದಲೂ ಇದೆ. ಆದರೆ ತಾಲೂಕು ಆಡಳಿತ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಹಿಂದೆ ಬಿದ್ದಿದೆ. ಈಗ ಕೊರೊನಾದಿಂದ ಲಾಕ್‌ಡೌನ್ ಘೋಷಣೆಯಾಗಿದ್ದು, ಜನರು ಮನೆಯಿಂದ ಹೊರಗೆ ಬರದಂತೆ ಕಟ್ಟುನಿಟ್ಟಿನ ಆದೇಶ ಮಾಡಿದೆ.
ಆದರೆ ವಾಗಣಗೇರಾದ ಜನತೆ ಕುಡಿಯುವ ನೀರಿಗಾಗಿ ಹಗಲಿರುಳು ಗುಂಪಾಗಿ ನಿಂತು ನೀರಿಗಾಗಿ ಕಾಯಬೇಕಾಗಿದೆ. ಇದರಿಂದ ಲಾಕ್‌ಡೌನ್ ನಿಯಮ ಗಾಳಿಗೆ ತೂರಿದಂತಾಗಿದೆ. ಸರಕಾರ ಮೊದಲು ಈ ಗ್ರಾಮದ ಜನತೆಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
Be the first to comment