ಜೀಲ್ಲಾ ಸುದ್ದಿಗಳು
ಬೀದರ ಏ 26 (ಅಂಬಿಗ ನ್ಯೂಸ್ ): ತಾಲೂಕು ಪಂಚಾಯಿತಿ ಬೀದರ್ ಕಚೇರಿಯಲ್ಲಿ ಮಹಾತ್ಮ ಶ್ರೀ ಬಸವೇಶ್ವರ ಜಯಂತಿ ಆಚರಣೆ ಕಾರ್ಯಕ್ರಮವು ಸರಳವಾಗಿ ನಡೆಯಿತು.
ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಗೀತಾ ಪಂಡಿತ್ರಾವ್ ಚಿದ್ರಿ ಅವರು ಬಸವೇಶ್ವರರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಲಕ್ಷ್ಮಣ್ ಈಶ್ವರ ಬುಳ್ಳಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ್ ಗಂಗವಾರ್, ತಾಲೂಕು ಪಂಚಾಯಿತಿ ಅಧ್ಯಕ್ಷರಾದ ವಿಜಯಕುಮಾರ್ ರಾಮಲು ಬರೂರು, ಉಪಾಧ್ಯಕ್ಷರಾದ ರಾಜಕುಮಾರ್ ಪಾಟೀಲ್, ಜಿಪಂ ಉಪ ಕಾರ್ಯದರ್ಶಿಗಳಾದ ಸೂರ್ಯಕಾಂತ್, ತಾಪಂ ಕಾರ್ಯನಿರ್ವಹಣಾಧಿಕಾರಿ ಧನರಾಜ್ ಬೋರಾಳೆ, ತಾಪಂ ಸಹಾಯಕ ನಿರ್ದೇಶಕರಾದ ಶರತ್ಕುಮಾರ್ ಮತ್ತು ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕಚೇರಿಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Be the first to comment