ಜೀಲ್ಲಾ ಸುದ್ದಿಗಳು
ಬೀದರ ಏಪ್ರಿಲ್ 26 (ಅಂಬಿಗ ನ್ಯೂಸ್ ): ಜಗಜ್ಯೋತಿ ಬಸವೇಶ್ವರರ ಜಯಂತಿಯನ್ನು ಜಿಲ್ಲಾಡಳಿತದಿಂದ ಏ.26ರಂದು ಕೋವಿಡ್-19 ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿಗಳಾದ ಡಾ.ಹೆಚ್.ಆರ್.ಮಹಾದೇವ್ ಅವರು ಪೂಜೆ ಸಲ್ಲಿಸಿ ಬಳಿಕ ಪುಷ್ಪನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ರಹೀಂ ಖಾನ್, ಹಿರಿಯ ಪತ್ರಕರ್ತರಾದ ಶಿವಶರಣಪ್ಪ ವಾಲಿ, ಬಾಬು ವಾಲಿ, ಅಕ್ಕ ಅನ್ನಪೂರ್ಣತಾಯಿ, ಅಪರ ಜಿಲ್ಲಾಧಿಕಾರಿಗಳಾದ ರುದ್ರೇಶ ಗಾಳಿ, ಬೀದರ ಸಹಾಯಕ ಆಯುಕ್ತರಾದ ಅಕ್ಷಯ್ ಶ್ರೀಧರ್ ಹಾಗೂ ಇತರರು ಇದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೇರಿದಂತೆ ವಿವಿಧ ಸರ್ಕಾರಿ ಮತ್ತು ಅರೇ ಸರ್ಕಾರಿ ಕಚೇರಿಗಳಲ್ಲಿ ಕೂಡ ಶ್ರೀ ಬಸವೇಶ್ವರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಬಸವ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
Be the first to comment