ಕರೋನಾ ಹಿನ್ನೆಲೆ: ಶಾಸಕರಾದ ಬಂಡೆಪ್ಪ ಖಾಶೆಂಪೂರ ಅವರಿಂದ ಸಭೆ

ಜೀಲ್ಲಾ ಸುದ್ದಿಗಳುಬಿದರ ಏಪ್ರಿಲ್ 27 (ಅಂಬಿಗ ನ್ಯೂಸ್ ): ಕೋರೋನ್ ವೈರಸ್ ಹರಡುವುದನ್ನು ತಡೆಯುವ ಹಿನ್ನೆಲೆಯಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಬಂಡೆಪ್ಪ ಖಾಶೆಂಪೂರ್ ಅವರು ಏ.27ರಂದು ಕಮಠಾಣ ಗ್ರಾಮದಲ್ಲಿ ಹೋಬಳಿ ಮಟ್ಟದ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು.

ಕರೋಣಾ ನಿಯಂತ್ರಣಕ್ಕೆ ಗ್ರಾಮಮಟ್ಟದಲ್ಲಿ ತೆಗೆದುಕೊಂಡ ಕ್ರಮಗಳ ಬಗ್ಗೆ ಶಾಸಕರು ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಅವರು, ಕರೋನಾ ವ್ಯಾಪಕವಾಗಿ ಹರಡುತ್ತಿದೆ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಕ್ರಮ ವಹಿಸಲು ನಿರ್ದೇಶಿಸಿದಂತೆ ಹೋಬಳ್ಳಿ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಯು ಕರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ಎಲ್ಲ ಕಾರ್ಯಕ್ರಮಗಳನ್ನು ಸರಿಯಾಗಿ ಅನುಷ್ಠಾನಗೊಳಿಸಲು ಕಾಳಜಿ ವಹಿಸಬೇಕು ಎಂದು ತಿಳಿಸಿದರು.
ಹೋಬಳ್ಳಿ ಮಟ್ಟದಲ್ಲಿ ಕೂಡ ಎಲ್ಲಾ ಕಡೆಗೆ ಶುಚಿತ್ವಕ್ಕೆ ಒತ್ತು ಕೊಡಲಾಗಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಗ್ರಾಮಮಟ್ಟದಲ್ಲಿ ಎಲ್ಲ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ನಡೆಯುತ್ತಿವೆ. ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಕೂಡ ಜನಜಾಗೃತಿ ಮೂಡಿಸುತ್ತಿದ್ದಾರೆ ಎಂದು ಅಧಿಕಾರಿಗಳು ಶಾಸಕರಿಗೆ ಮಾಹಿತಿ ನೀಡಿದರು.
ವರದಿ.ಚಂದ್ರಕಾಂತ ಹಳ್ಳಿಖೇಡಕರ ಬೀದರ್.

Be the first to comment

Leave a Reply

Your email address will not be published.


*