ಜೀಲ್ಲಾ ಸುದ್ದಿಗಳು
ಬೆಳಗಾವಿ ಸೇರಿದಂತೆ 8 ಜಿಲ್ಲೆಗಳಲ್ಲಿ ಲಾಕ್ ಡೌನ್ ನಲ್ಲಿ ಸಡಿಲಿಕೆಯಿಲ್ಲ
ಅಂಬಿಗ ನ್ಯೂಸ್ ಸುದ್ದಿ; ಬೆಂಗಳೂರು: ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮೇ 3ರ ವರೆಗೂ ಮಾತ್ರ ಈ ಮಾರ್ಗಸೂಚಿ ಅನ್ವಯವಾಗುವಂತೆ ಲಾಕ್ ಡೌನ್ ನಲ್ಲಿ ಕೆಲ ಸಡಿಲಿಕೆ ಮಾಡಿ ಆದೇಶ ನೀಡಿದೆ.
ಆದರೆ ಬೆಳಗಾವಿ ಸೇರಿದಂತೆ 8 ಜಿಲ್ಲೆಗಳಲ್ಲಿ ಈ ಮಾರ್ಗಸೂಚಿ ಅನ್ವಯವಾಗುವುದಿಲ್ಲ.
ಸಿಎಂ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಅಧಿಕಾರಿಗಳ ಸಭೆ ನಡೆದಿದ್ದು, ಸಭೆಯಲ್ಲಿ ರಾಜ್ಯದ ಆರ್ಥಿಕ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ಧಿಕಾರಿಗಳು ಹಲವು ಸಲಹೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ 13 ಜಿಲ್ಲೆಗಳಿಗೆ ಮೇ 3ರವರೆಗೆ ಅನ್ವವಾಗುವಂತೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ರಾಜ್ಯ ಸರ್ಕಾರದ ಈ ಮಾರ್ಗಸೂಚಿ ಗ್ರೀನ್ ಜೋನ್ಗಳಾದ ರಾಯಚೂರು, ಶಿವಮೊಗ್ಗ, ಯಾದಗಿರಿ, ಹಾಸನ, ಕೊಪ್ಪಳ, ಹಾವೇರಿ, ಕೋಲಾರ, ರಾಮನಗರ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರಕ್ಕೆ ಅನ್ವಯವಾಗಲಿವೆ.
ಇಲ್ಲಿ ವ್ಯಾಪಾರ ಮತ್ತು ವಹಿವಾಟಿಗೆ ಅವಕಾಶ ನೀಡಲಾಗಿದೆ. ವಿಶೇಷ ಆರ್ಥಿಕ ವಲಯ, ಕೈಗಾರಿಕಾ ವಲಯ, ಕೈಗಾರಿಕಾ ಟೌನ್ಶಿಪ್, ರಫ್ತು ಆಧಾರಿತ ವಲಯಗಳಲ್ಲಿ ಕೆಲಸ ಮಾಡಲು ಕಾರ್ಮಿಕರಿಗೆ ಅವಕಾಶ ಮಾಡಿಕೊಡಲಾಗಿದೆ. ಜತೆಗೆ ಇವರಿಗೆ ಕೆಲಸ ಮಾಡುವ ಸ್ಥಳದಲ್ಲೇ ವಾಸ್ಯವಕ್ಕೆ ಅವಕಾಶ ನೀಡಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ವಸತಿ ಸಮುಚ್ಛಯಗಳಲ್ಲಿನ ಕಾಂಪ್ಲೆಕ್ಸ್, ಅಂಗಡಿ ಮತ್ತು ಮಳಿಗೆಗಳನ್ನು ತೆರೆಯಬಹುದು.
ಜನ ಸೇರುವ ಮಾಲ್ ಮತ್ತು ಕಮರ್ಷಿಯಲ್ ಬಿಲ್ಡಿಂಗ್ಗಳು ತೆರೆಯುವಂತಿಲ್ಲ. ಸಾಮಾಜಿಕ ಅಂತರ ಪಾಲೀಸಬೇಕು. ಇನ್ನು ಬೆಂಗಳೂರು ನಗರ, ಮೈಸೂರು, ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್, ಬಾಗಲಕೋಟೆ, ದಕ್ಷಿಣ ಕನ್ನಡ ರೆಡ್ ಝೋನ್ ನಲ್ಲಿರುವ ಈ 8 ಜಿಲ್ಲೆಗಳಿಗೆ ರಾಜ್ಯ ಸರ್ಕಾರದ ಹೊಸ ಮಾರ್ಗಸೂಚಿ ಅನ್ವಯವಾಗುವುದಿಲ್ಲ.
Be the first to comment