ನಿತ್ಯೋತ್ಸವದ ಕವಿ ನಿಧನಕ್ಕೆ ಸಚಿವರಾದ ಪ್ರಭು ಚವ್ಹಾಣ್ ಸಂತಾಪ

ವರದಿ:- ಚಂದ್ರಕಾಂತ ಹಳ್ಳಿಖೇಡಕರ್ ಬೀದರ್.

ಜೀಲ್ಲಾ ಸುದ್ದಿಗಳು

ಬೀದರ ಮೇ 03 (ಅಂಬಿಗ ನ್ಯೂಸ್ ): ತಮ್ಮ ಜೀವನದುದ್ದಕ್ಕೂ ಕನ್ನಡ ನಾಡು-ನುಡಿ ಸೇವೆ ಮಾಡಿದ ನಾಡಿನ ಹಿರಿಯ ಕವಿ ಕೆ.ಎಸ್.ನಿಸಾರ್ ಅಹಮದ್ ಅವರ ಅಗಲಿಕೆಯು ನಾಡಿಗೆ ಹಾಗೂ ಸಾಹಿತ್ಯಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ನಿತ್ಯೋತ್ಸವ ಗೀತೆಯ ಮೂಲಕ ಕನ್ನಡಿಗರ ಮನದಲ್ಲಿ ಅಚ್ಚಳಿಯದೇ ಉಳಿಯುವಂತಹ ಸಾಹಿತ್ಯ ಸೃಷ್ಟಿಸಿದ ಕವಿ ನಿಸಾರ್ ಅಹಮದ್ ಅವರು ಅಮರರಾಗಿದ್ದಾರೆ ಎಂದು ಪಶು ಸಂಗೋಪಣೆ, ಹಜ್ ಮತ್ತು ವಕ್ಫ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ತಿಳಿಸಿದ್ದಾರೆ.

ನಿತ್ಯೋತ್ಸವ ಕವಿ ಎಂದು ಖ್ಯಾತಿ ಪಡೆದಿದ್ದ ಕವಿ ಕೆ.ಎಸ್.ನಿಸಾರ್ ಅಹಮದ್ ಅವರು ಪದ್ಮಶ್ರೀ, ಪಂಪ ಪ್ರಶಸ್ತಿ, ನಾಡೋಜ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗೆ ಭಾಜನರಾಗಿದ್ದರು. ಸಾಹಿತ್ಯ, ಕವಿತೆಗಳ ಮೂಲಕ ಕನ್ನಡ ನಾಡುನುಡಿಗೆ ಅಪಾರವಾದ ಸೇವೆ ಸಲ್ಲಿಸಿದ್ದಾರೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಸಚಿವರಾದ ಚವ್ಹಾಣ್ ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*