ಪಡಿತರ ವಿತರಣೆಯಲ್ಲಿ ಅಕ್ರಮ,ಕ್ರಮ ಕೈಗೊಳ್ಳಲು ಮುಂದಾಗದ ಅಧಿಕಾರಿಗಳು, ಸ್ವಾಭಿಮಾನಿ ಕರವೇ ವತಿಯಿಂದ ಪ್ರತಿಭಟನೆ ರಾಜ್ಯಾಧ್ಯಕ್ಷ ರಾಜೇಶ್ ರೆಡ್ಡಿ ಹೇಳಿಕೆ .

ವರದಿ:- ಪ್ರಕಾಶ ಮಂದಾರ ಹರಿಹರ

ಜೀಲ್ಲಾ ಸುದ್ದಿಗಳು

ಹರಿಹರ:-ಕಳೆದ ತಿಂಗಳು ತಾಲೂಕಿನ 125 ನ್ಯಾಯಬೆಲೆ ಅಂಗಡಿಗಳ ಮೂಲಕ ತಾಲ್ಲೂಕಿನ ಪಡಿತರ ಚೀಟಿದಾರರಿಗೆ ಪಡಿತರವನ್ನು ಉಚಿತವಾಗಿ ವಿತರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿತ್ತು .

ಅದರಂತೆ ತಾಲ್ಲೂಕಿನ ಪಡಿತರ ವಿತರಣೆಯಲ್ಲಿ ಅಕ್ರಮದ ವಾಸನೆ ಕೇಳಿ ಬಂದಿತ್ತು ಇದಕ್ಕೆ ಸಂಬಂಧಿಸಿದಂತೆ ಪತ್ರಿಕೆ ಮತ್ತು ದೃಶ್ಯ ಮಾಧ್ಯಮದಲ್ಲಿ ಸುದ್ದಿಯನ್ನು ಪ್ರಸಾರ ಮಾಡಲಾಗಿತ್ತು .ಸುದ್ದಿಯನ್ನು ಪ್ರಸಾರ ಮಾಡಿ ಸುಮಾರು ಇಪ್ಪತ್ತು ದಿನ ಕಳೆದರೂ ಸಂಬಂಧಿಸಿದ ಅಧಿಕಾರಿಗಳು ಅಕ್ರಮ ಎಸಗಿದ್ದ ನ್ಯಾಯಬೆಲೆ ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ .

ಕರೋನಾ ಲಾಗ್ ಟೌನ್ ಸಂಕಷ್ಟದ ಸಮಯದಲ್ಲಿ ಪಡಿತರ ಚೀಟಿದಾರರಿಂದ ಅಕ್ರಮವಾಗಿ ಹಣ ವಸೂಲಿ ,ಪಡಿತರ ವಿತರಣೆಯಲ್ಲಿ ಲೋಪ ಎಸಗಿರುತ್ತಾರೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಯವರ ಮೇಲೆ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯು ಕರೋನಾ ಲಾಕ್ ಡೌನ್ ಸಂಪೂರ್ಣವಾಗಿ ಮುಗಿದ ಮೇಲೆ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ಸಂಘಟನೆಯ ವತಿಯಿಂದ ಮೌನ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ರಾಜೇಶ್ ರೆಡ್ಡಿ ಇವರು ನಮ್ಮ ಮಾಧ್ಯಮ ಪ್ರತಿನಿಧಿಯೊಂದಿಗೆ ಹಂಚಿಕೊಂಡಿದ್ದಾರೆ .

ಹರಿಹರ ತಾಲ್ಲೂಕಿನಾದ್ಯಂತ ಸುಮಾರು 125 ನ್ಯಾಯ ಬೆಲೆ ಅಂಗಡಿಗಳು ಇದ್ದು ಸರಿಸುಮಾರು 59.350. ಪಡಿತದಾರರು ಹೊಂದಿದ್ದಾರೆ .ತಾಲ್ಲೂಕಿನಲ್ಲಿರುವ ಇವರೆಲ್ಲಾ ಪಡಿತರ ಚೀಟಿದಾರರಿಗೆ ಎರಡು ತಿಂಗಳ ಮುಂಚಿತವಾಗಿ ಉಚಿತ ಅಕ್ಕಿ ಮತ್ತು ಗೋಧಿಯನ್ನು ವಿತರಣೆ ಮಾಡಲಾಗಿತ್ತು ಆದರೆ ತಾಲ್ಲೂಕಿನ ಕೆಲ ನ್ಯಾಯಬೆಲೆ ಅಂಗಡಿಯವರು ಜನರಿಂದ ಒಂದು ಕಾರ್ಡಿಗೆ 20 ರೂಪಾಯಿಯಂತೆ ಹಣ ವಸೂಲಿ ಮಾಡಿರುತ್ತಾರೆ ಅಲ್ಲದೆ ಪ್ರತಿ ಕಾಡಿಗೆ ನಾಲ್ಕು ಕೆಜಿ ಗೋಧಿ ವಿತರಿಸಬೇಕಾಗಿತ್ತು ಆದರೆ ಕೆಲವು ನ್ಯಾಯಬೆಲೆ ಅಂಗಡಿಯವರು ಎರಡು ಕೆಜಿ ಗೋಧಿಯನ್ನು ವಿತರಣೆ ಮಾಡಿದ್ದಾರೆ ಹಾಗೂ ತೂಕದಲ್ಲಿ ಅಕ್ರಮ ಎಸಗಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಅಂಬಿಗಾ ನ್ಯೂಸ್ ವಾಹಿನಿಯಲ್ಲಿ ಸವಿಸ್ತಾರವಾದ ವರದಿಯನ್ನು ಮಾಡಿರುತ್ತಾರೆ ಆದರೆ ಅಧಿಕಾರಿಗಳು ಅಕ್ರಮ ಎಸಗಿದ್ದ ನ್ಯಾಯಬೆಲೆ ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳಲು ಮುಂದಾಗದ ಕಾರಣ ನಾವು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕರೋನಾ ಲಾಕ್ ಡೌನ್ ಮುಗಿದ ಮೇಲೆ ಜಿಲ್ಲಾಧಿಕಾರಿಗಳು ಅನುಮತಿ ಪಡೆದು ಅವರು ನೀಡುವ ದಿನಾಂಕದಂದು ಕಚೇರಿಯ ಮುಂಭಾಗದಲ್ಲಿ ಮೌನ ಪ್ರತಿಭಟನೆಯನ್ನು ನಡೆಸಲಾಗುತ್ತದೆ .ಅಂದಿನ ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕು ಸಂಘಟನೆಯ ಪದಾಧಿಕಾರಿಗಳು ಕಾರ್ಯಕರ್ತರು ಪಾಲ್ಗೊಳ್ಳುತ್ತಿದ್ದಾರೆ .

ಅಂದು ನಡೆಯುವ ಪ್ರತಿಭಟನೆಯು ಸಾಮಾಜಿಕ ಅಂತರದಲ್ಲಿ ನಡೆಯುತ್ತದೆ .ಹಾಗೂ ಪ್ರತಿಭಟನೆಯ ನಂತರ ಅಧಿಕಾರಿಗಳು ಸಂಬಂಧಿಸಿದ ನ್ಯಾಯಬೆಲೆ ಅಂಗಡಿಯವರ ಮೇಲೆ ಕ್ರಮ ಕೈಗೊಳ್ಳದಿದ್ದರೆ ರಾಜ್ಯಮಟ್ಟದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಇದೇ ಸಂದರ್ಭದಲ್ಲಿ ನೀಡುತ್ತಿದ್ದೇವೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ರಾಜೇಶ್ ರೆಡ್ಡಿ ನಮ್ಮ ಪತ್ರಿಕಾ ಮಾಧ್ಯಮ ಪ್ರತಿನಿಧಿಯೊಂದಿಗೆ ಮುಂದಿನ ಪ್ರತಿಭಟನೆಯ ಕುರಿತು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು .

ಸಂಬಂಧಿಸಿದ ಅಧಿಕಾರಿಗಳು ಸ್ವಾಭಿಮಾನಿ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷರು ಹಮ್ಮಿಕೊಂಡಿರುವ ಪ್ರತಿಭಟನೆ ನಡೆಸುವ ಮೊದಲು ಸಂಬಂಧಿಸಿದ್ದ ಅಕ್ರಮ ಎಸಗಿದ್ದ ನ್ಯಾಯಬೆಲೆ ಅಂಗಡಿಯವರ ಮೇಲೆ ಕ್ರಮಕ್ಕೆ ಮುಂದಾಗುತ್ತಾರೋ ಕಾದು ನೋಡಬೇಕಾಗಿದೆ .

Be the first to comment

Leave a Reply

Your email address will not be published.


*