ಜೀಲ್ಲಾ ಸುದ್ದಿಗಳು
ದಾವಣಗೆರೆಯಲ್ಲಿ 800 ಜನರ ಕ್ವಾರೆಂಟೈನ್; ನಗರ ಸಂಪೂರ್ಣ ಸೀಲ್ ಡೌನ್ ಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ
ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 44ಕ್ಕೆ ಏರಿಕೆಯಾದ ಹಿನ್ನೆಲೆ ಜಿಲ್ಲೆಯಲ್ಲಿ 800 ಜನರನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ತಿಳಿಸಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇನ್ನಷ್ಟು ಕೊರೊನಾ ವೈರಸ್ ಪ್ರಕರಣ ಪತ್ತೆಯಾಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ದಾವಣಗೆರೆ ನಗರವನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡುವಂತೆ ಜಿಲ್ಲಾಡತಕ್ಕೆ ಸೂಚನೆ ನೀಡಿದ್ದೇನೆ. ಮಾದರಿ ಪರೀಕ್ಷೆಗೆ ಕಳಿಸಿದ ವರದಿಗಳು ಇಂದು ಬರುವ ಸಾಧ್ಯತೆ ಇದೆ ಎಂದರು.
ಜಿಲ್ಲೆಯಲ್ಲಿ ಆದಷ್ಟು ಬೇಗ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಟೆಸ್ಟಿಂಗ್ ಲ್ಯಾಬ್ ತೆರೆಯಲಾಗುವುದು. ಈಗಾಗಲೇ ಎಸ್ ಎಸ್ ಆಸ್ಪತ್ರೆಯಲ್ಲಿ ಟೆಸ್ಟಿಂಗ್ ಲ್ಯಾಬ್ ತೆರೆಯಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಲ್ಯಾಬ್ ತೆರೆದ ನಂತರ ದಾವಣಗೆರೆ ಇನ್ನಷ್ಟು ಜನರನ್ನು ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು.
Be the first to comment