ಸತೀಶ್ ಜಾರಕಿಹೊಳಿ ಅಭಿಮಾನಿ ಬಳಗದಿಂದ ಅಗತ್ಯ ವಸ್ತುಗಳ ಕಿಟಗಳನ್ನು ವಿತರಿಸಲಾಯಿತು

ಜಿಲ್ಲಾ ಸುದ್ದಿಗಳು

ಸಂಕೇಶ್ವರ: ಹುಕ್ಕೇರಿ.ಸಮೀಪದ ಗವನಾಳ ಗ್ರಾಮದಲ್ಲಿ ಸತೀಶ್ ಜಾರಕಿಹೊಳಿ ಅಭಿಮಾನಿ ಬಳಗದಿಂದ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಸುಮಾರು ೩೫೦ಕ್ಕೂ ಹೆಚ್ಚು ಬಡ ಕೂಲಿ ಕಾರ್ಮಿಕ ಕುಟುಂಬಗಳಿಗೆ ದಿನಬಳಕೆಯ ಅಗತ್ಯ ವಸ್ತುಗಳ ಕಿಟಗಳನ್ನು ವಿತರಿಸಲಾಯಿತು.

ಮುಖ್ಯ ಅತಿಥಿಯಾಗಿ ರಾಷ್ಟ್ರೀಯ ಕಾಂಗ್ರೆಸ್ ಸೇವಾ ದಳದ ಮಾಜಿ ಅಧ್ಯಕ್ಷ ಬಿ.ಕೆ.ಹರಿ ಪ್ರಸಾದ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಮತಕ್ಷೇತ್ರದ ಶಾಸಕರಾದ ಸತೀಶ್ ಜಾರಕಿಹೊಳಿ ಮಾತನಾಡಿ, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕೇವಲ ಸರಕಾರ ಮಾತ್ರವಲ್ಲದೇ ಸರ್ಕಾರೇತರ ಸಂಘ-ಸಂಸ್ಥೆಗಳು, ಸ್ಥಳೀಯ ಆಡಳಿತದ ಪಾತ್ರವೂ ಮಹತ್ವದಾಗಿದೆ ಎಂದರಲ್ಲದೇ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.
ನೇತೃತ್ವ ವಹಿಸಿದ್ದ ಯಮಕನಮರಡಿ ಓಬಿಸಿ ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಂ.ಎಸ್.ಕುಂದಿ ಮಾತನಾಡಿ, ಶಾ ಸಕ ಸತೀಶ್ ಜಾರಕಿಹೊಳಿಯವರ ಸಮಾಜಮುಖಿ ಕಾರ್ಯಗಳನ್ನು ಪ್ರಶಂಸಿಸುತ್ತಾ, ಕಾಂಗ್ರೆಸ್ ಪಕ್ಷದ ರಾಜ್ಯ ಪದಾಧಿಕಾರಿಗಳ ಸಹಕಾರದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಲಕ್ಷ್ಮಣರಾವ ಚಿಂಗಳೆ, ಉಪಾಧ್ಯಕ್ಷರಾದ ವೀರಕುಮಾರ ಪಾಟೀಲ, ಹೆಬ್ಬಾಳ ಜಿಲ್ಲಾ ಪಂಚಾಯತ ಸದಸ್ಯ ಮಹಾಂತೇಶ ಮಗದುಮ್ಮ ಸೇರಿದಂತೆ ಕಾರ್ಯಕರ್ತರು, ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ: ಕಲ್ಲಪ್ಪಾ ಪಾಮನಾಯಿಕ

Be the first to comment

Leave a Reply

Your email address will not be published.


*