ಕೃಷ್ಣಾ ಮೇಲ್ದಂಡೆ ಯೋಜನೆ, ಭೂ ಸ್ವಾಧೀನ ಕಾಯ್ದೆ 2013 ರಂತೆ ಪರಿಹಾರ ಚಿಂತನೆ

ಅಮರೇಶ ಕಾಮನಕೇರಿ

 

ರಾಜ್ಯ ಸುದ್ದಿಗಳು

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಭೂ ಸ್ವಾಧೀನ ಕಾಯ್ದೆ 2013 ರಂತೆ ಪರಿಹಾರ ನೀಡಲು ಬುಧವಾರ ಚರ್ಚಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ಸೇರಿ ಭೂ ಸ್ವಾಧೀನ ‌ಮತ್ತು ಪರಿಹಾರ ಕುರಿತು ಅಂತಿಮ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ‌ ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆಯ ಭೂ ಸ್ವಾಧೀನ ಕುರಿತಾದ ಉನ್ನತ ಮಟ್ಟದ ಸಭೆಯನ್ನು ನಡೆಸಲಾಗಿದ್ದು, ಶೀಘ್ರದಲ್ಲಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಕೃಷ್ಣಾ ಮೇಲ್ದಂಡೆ ಯೋಜನೆಗೆ ಅನುದಾನ ಘೋಷಣೆ- ಬಿಎಸ್‌ವೈಗೆ ಧನ್ಯವಾದ ಸಲ್ಲಿಸಿದ ಕಾರಜೋಳ

ಉನ್ನತ ಮಟ್ಟದ ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಕಾನೂನು ಸಚಿವರಾದ ಮಾಧುಸ್ವಾಮಿ, ಜವಳಿ ಸಚಿವ ಶ್ರೀಮಂತ ಪಾಟೀಲ್, ತೋಟಗಾರಿಕೆ ಸಚಿವ ನಾರಾಯಣ ಗೌಡ, ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು.

ಈ ಬಾರಿಯ ಬಜೆಟ್ ನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಗೆ 10,000 ಕೋಟಿ ಹಣವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವುದಾಗಿ ತಿಳಿಸಿದ್ದರು

Be the first to comment

Leave a Reply

Your email address will not be published.


*