ಜೀಲ್ಲಾ ಸುದ್ದಿಗಳು
ಅಂಬಿಗ ನ್ಯೂಸ್ ಯಾದಗಿರಿ.
ಬ್ರೇಕಿಂಗ್ ನ್ಯೂಸ್:- ಕೊರೊನಾ ವೈರಾಣು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ನೆರೆ ರಾಜ್ಯಗಳಿಂದ ಮಹಾರಾಷ್ಟ್ರ, ಪುಣೆ, ಮುಂಬೈ ದಿಂದ ನಮ್ಮ ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹೋಂ ಕ್ವಾರಂಟೈನ ಮಾಡಿದರೂ ಗ್ರಾಮೀಣ ಪ್ರದೇಶ ಮತ್ತು ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಜನರು ಓಡಾಡುತ್ತಿರುವುದು ಕಂಡುಬಂದಿರುವುದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ ಇಂದು ಮಧ್ಯರಾತ್ರಿ 12 ಗಂಟೆಯವರೆಗೆ ಯಾದಗಿರಿ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್ ಡೌನಗೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಜಿಲ್ಲೆಯಾದ್ಯಂತ ಎಲ್ಲಾ ತರಹದ ಅಂಗಡಿ-ಮುಂಗಟ್ಟುಗಳನ್ನು ತೆರೆಯುವಂತಿಲ್ಲ
ಧಾರ್ಮಿಕ ಸಭೆ,ವೈಯಕ್ತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ
ಆಸ್ಪತ್ರೆಗಳು, ಔಷಧಿ ಅಂಗಡಿಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತವೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
Be the first to comment