ಯಾದಗಿರಿ ಜಿಲ್ಲೆಯಾದ್ಯಂತ ಸೂಕ್ತ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌಹಾಣ್‌ ಮನವಿ

ವರದಿ:ರಾಘವೇಂದ್ರ ಮಾಸ್ತರ ಯಾದಗಿರಿ

ಜೀಲ್ಲಾ ಸುದ್ದಿಗಳು

ಸಾರ್ವಜನಿಕರ ಹಿತದೃಷ್ಟಿಯಿಂದ ಹೊರ ರಾಜ್ಯಗಳಿಂದ ಆಗಮಿಸುತ್ತಿರುವ ವಲಸೆ ಕಾರ್ಮಿಕರು ಕಡ್ಡಾಯವಾಗಿ 14 ದಿನಗಳ ಕ್ವಾರಂಟೈನ್​ಗೆ ಒಳಪಡಬೇಕಾಗುತ್ತದೆ.

ಯಾರಾದರೂ ಬೇರೆ ರಾಜ್ಯಗಳಿಂದ ವಲಸೆ ಬಂದಿರುವುದು ಕಂಡು ಬಂದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರಬೇಕು.

ಅಂಬಿಗ ನ್ಯೂಸ್ ಯಾದಗಿರಿ :

ಲಾಕ್​ಡೌನ್​ ಸಡಿಲಿಕೆಯಾಗಿದ್ದರಿಂದ ಬೇರೆ ಬೇರೆ ರಾಜ್ಯಗಳಿಂದ ಜನರು ಜಿಲ್ಲೆಗೆ ಮರಳಿ ಬರುತ್ತಿದ್ದಾರೆ. ಇದರಿಂದ ಯಾದಗಿರಿ ಜಿಲ್ಲೆಯಲ್ಲಿ ಎರಡು ಕೊರೊನಾ ಪಾಸಿಟಿವ್ ಪ್ರಕರಣ ಬೆಳಕಿಗೆ ಬಂದಿವೆ. ಹಾಗಾಗಿ ಜನತೆ ಜಾಗರೂಕರಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲೇಬೇಕು ಎಂದು ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚೌಹಾಣ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ

ಸುರಪುರ ತಾಲೂಕಿನ ಇಬ್ಬರಿಗೆ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿವೆ. ಇವರ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚುವ ಕಾರ್ಯ ನಡೆದಿದೆ. ಈ ಸಾಂಕ್ರಾಮಿಕ ರೋಗ ತಡೆಗಟ್ಟುವಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯ. ಸಾರ್ವಜನಿಕರ ಹಿತದೃಷ್ಟಿಯಿಂದ ಹೊರ ರಾಜ್ಯಗಳಿಂದ ಆಗಮಿಸುತ್ತಿರುವ ವಲಸೆಗಾರರು ಕಡ್ಡಾಯವಾಗಿ 14 ದಿನಗಳ ಕ್ವಾರಂಟೈನ್​ಗೆ ಒಳಪಡಬೇಕಾಗುತ್ತದೆ. ಯಾರಾದರೂ ಬೇರೆ ರಾಜ್ಯಗಳಿಂದ ವಲಸೆ ಬಂದಿರುವುದು ಕಂಡು ಬಂದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಯಾರೂ ಸ್ವಗ್ರಾಮಕ್ಕೆ ಹೋಗಬಾರದು. ಒಂದು ವೇಳೆ ಅಂತವರು ಯಾರಾದರೂ ಕಂಡು ಬಂದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರುವಂತೆ ಸಚಿವರು ಕೋರಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ಎಲ್ಲರೂ ಸರ್ಕಾರದ ಆದೇಶ ಪಾಲಿಸುವುದರ ಜೊತೆ ತಮ್ಮ ತಮ್ಮ ಮನೆಯಲ್ಲಿಯೇ ಇರಬೇಕು. ಅನಾವಶ್ಯಕವಾಗಿ ರಸ್ತೆಯಲ್ಲಿ ತಿರುಗಾಡಬಾರದು. ಪ್ರತಿಯೊಂದು ಚೆಕ್‍ ಪೋಸ್ಟ್​ಗಳಲ್ಲಿ ಕಡ್ಡಾಯವಾಗಿ ತಪಾಸಣೆಗೆ ಒಳಗಾಗಬೇಕು. ಜಿಲ್ಲೆಯ ಎಲ್ಲಾ ಶಾಸಕರು, ಜನಪ್ರತಿನಿಧಿಗಳೂ ಸಹ ಉತ್ತಮ ರೀತಿಯಿಂದ ಸಹಕಾರ ನೀಡುತ್ತಿದ್ದಾರೆ. ಜನರ ಸಹಕಾರವೂ ಮುಖ್ಯವಾಗಿದ್ದು . ಕೊರೊನಾ ಮುಕ್ತ ಜಿಲ್ಲೆಗೆ ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

Be the first to comment

Leave a Reply

Your email address will not be published.


*