ಗರ್ಭಿಣಿಯರಿಗೆ ಆಹಾರದ ಕಿಟ್ ವಿತರಣೆ

ವರದಿ:- ಚಂದ್ರಕಾಂತ ಹಳ್ಳಿಖೇಡಕರ್ ಬೀದರ್.

ಜೀಲ್ಲಾ ಸುದ್ದಿಗಳು

ಬೀದರ್: ಲಾಕ್ ಡೌನ್ ಸಮಯದಲ್ಲಿಯೂ ಸಹ ಸರ್ಕಾರ ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗಾಗಿ ವಿತರಿಸಿದ ಪೌಷ್ಠಿಕಾಂಶವುಳ್ಳ ಆಹಾರದ ಕಿಟ್ ಗಳನ್ನು ಫಲಾನುಭವಿಗಳ ಮನೆ ಮನೆಗೆ ವಿತರಿಸುತ್ತಿರುವ ಹಳ್ಳದಕೇರಿಯ ಮೂರನೇ ಅಂಗನವಾಡಿಯ ಕಾರ್ಯಕರ್ತೆ ಮಂಗಲಾ ಅವರ ಕಾರ್ಯ ಶ್ಲಾಘನೀಯವಾಗಿದೆ ಎಂದು ಫಲಾನುಭವಿ ನವನೀತಾ ಸಂತಸವ್ಯಕ್ತಪಡಿಸಿದ್ದಾರೆ.

ಕೋವಿಡ್ 19 ಸೋಂಕಿನಿಂದಾಗಿ ಸರ್ಕಾರ ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ನೀಡುತ್ತಿದ್ದ ಪೌಷ್ಟಿಕಾಂಶವುಳ್ಳ ಆಹಾರದ ಕಿಟ್‌ಗಳನ್ನು ಶುಕ್ರವಾರ ವಿತರಿಸಿದರು.
ನಂತರ ಮಾತನಾಡಿದ ಅವರು,‘ ಸರ್ಕಾರವು ಗರ್ಭಿಣಿಯರಿಗೆ ಹಾಗೂ ಬಾಣಂತಿಯರಿಗೆ ಪೌಷ್ಟಿಕಾಂಶ ಆಹಾರಗಳಾದ ಅಕ್ಕಿ, ಬೆಲ್ಲ, ಶೇಂಗಾ ಹಾಗೂ ಉಪ್ಪಿನ ಪಾಕೆಟ್ ಕಳುಹಿಸಿದೆ. ಆದರೆ ಸದ್ಯ ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ಫಲಾನುಭವಿಗಳು ಅಂಗನವಾಡಿ ಕೇಂದ್ರಕ್ಕೆ ಬರಲು ಆಗುತ್ತಿಲ್ಲ. ಆದ್ದರಿಂದ ಫಲಾನುಭವಿಗಳ ಮನೆಗಳಿಗೆ ಭೇಟಿ ಕೊಟ್ಟು ಆಹಾರದ ಸಾಮಾಗ್ರಿಗಳನ್ನು ವಿತರಿಸಲಾಗುತ್ತಿದೆ’ ಎಂದು ತಿಳಿಸಿದರು.

Be the first to comment

Leave a Reply

Your email address will not be published.


*