ಜೀಲ್ಲಾ ಸುದ್ದಿಗಳು
ಅಂಬಿಗ ನ್ಯೂಸ್:- ಲಾಕ್ ಡೌನ್ ನಿಂದಾಗಿ ಮುಂದೂಡಲ್ಪಟ್ಟಿದ್ದಂತ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಜೂನ್ 25 ರಿಂದ ಜುಲೈ 4ವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಹಾಗೂ ಜೂನ್ 18 ರಂದು PUC ಪರೀಕ್ಷೆ ನಡೆಸಲಾಗುತ್ತದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಇವತ್ತಿನ ಪತ್ರಿಕಾ ಗೋಷ್ಠಿಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾದ ಉಮಾಶಂಕರ್ ಅವರು, ಆಯುಕ್ತರಾದ ಜಗದೀಶ್ ಸೇರಿದಂತೆ ಅನೇಕರಿದ್ದರು.
ಪ್ರಮುಖ ಅಂಶಗಳು :
1) ಹತ್ತಿರದ ಪರೀಕ್ಷಾ ಕೇಂದ್ರಗಳಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ
2) 2879 ಪರೀಕ್ಷಾ ಕೇಂದ್ರಗಳಲ್ಲಿ 8.48 ಲಕ್ಷ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು 43,720 ಕೊಠಡಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
3) ಎಲ್ಲ ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯ
4) ಸಂಘ ಸಂಸ್ಥೆಗಳಿಂದ ಮಾಸ್ಕ್ ದೇಣಿಗೆ
5) ಸಾಮಾಜಿಕ ಅಂತರದೊಂದಿಗೆ ಪರೀಕ್ಷೆ
6)ಎಲ್ಲಾ ಕೊಠಡಿಗಳಿಗೆ ಸ್ಯಾನಿಟೈಸರ ಸಿಂಪಡಿಸಲಾಗುವುದು.
7) ವಿದ್ಯಾರ್ಥಿಗಳಿಗೆ ಉಚಿತ ಬಸ್
8) ಇಂಗ್ಲೀಷ್, ಗಣಿತ,ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆಗಳಿಗೆ ಒಂದೊಂದು ದಿನ ಗ್ಯಾಪ್ ನೀಡಲಾಗುವುದು ಎಂದರು.
Be the first to comment