ಜೀಲ್ಲಾ ಸುದ್ದಿಗಳು
ಬಾಗಲಕೋಟೆ:ಮುಧೋಳ ತಾಲೂಕಿನ ಕುಳಲಿ ಗ್ರಾಮದಲ್ಲಿ ಮಹಾರಾಷ್ಟ್ರದ ಸಾಂಗ್ಲಿಯಿಂದ ಬಂದಿದ್ದ ಮಹಿಳೆಯಮಾಹಿತಿ ಪಡೆದು ಕ್ವಾರೆಂಟೈನ್‌ಗೆ ಒಳಪಡಿಸಲು ಕರೆತರಲು ಹೋಗಿದ್ದ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ ನಡೆಸಲಾಗಿದೆ.
ಗ್ರಾಮಕ್ಕೆ ಮಹಾರಾಷ್ಟ್ರದಿಂದ ತವರಿಗೆ ಬಂದಿರುವ ಸುದ್ದಿ ತಿಳಿದು ಆಶಾ ಕಾರ್ಯಕರ್ತೆ ಜ್ಯೋತಿ ಪೋಳ(೨೩) ಅವರ ಮನೆಗೆ ತೆರಳಿದ್ದಾರೆ. ಮಹಿಳೆಯ ಬಗ್ಗೆ ಮಾಹಿತಿ ಕಲೆ ಹಾಕಲು ಮುಂದಾದಾಗ ಆಕೆಯ ಸಹೋದರ ವಿಠ್ಠಲ ಗಸ್ತಿ ಎಂಬುವವರು ಹಲ್ಲೆ ನಡೆಸಿ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ತಿಳಿದುಬಂದಿದೆ.
ಹಲ್ಲೆಯಿಂದ ಗಾಯಗೊಂಡ ಜ್ಯೋತಿ ಅವರನ್ನು ಮುಧೋಳ ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಗ್ರಾಮಕ್ಕೆ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು. ಮುಧೋಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Be the first to comment