ಜೀಲ್ಲಾ ಸುದ್ದಿಗಳು
ಯಾದಗಿರಿ:ಶಹಾಪುರದಲ್ಲಿ ಇಂದು ರಂಜಾನ್ ಹಬ್ಬದ ನಿಮಿತ್ತ ಮುಸ್ಲಿಂ ಬಾಂಧವರು ತಮ್ಮ ತಮ್ಮ ಮನೆಯಲ್ಲಿಯೇ ಪ್ರಾರ್ಥನೆಯನ್ನು ಮಾಡುವುದರ ಮೂಲಕ ಪವಿತ್ರ ರಂಜಾನ್ ಹಬ್ಬವನ್ನು ಆಚರಿಸಿಕೊಂಡರು.
ಕೊರೊನಾ ಸೋಂಕು ಹಿನ್ನೆಲೆಯಲ್ಲಿ ದೇಶಾದ್ಯಂತ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಸರಕಾರ ಧಾರ್ಮಿಕ ಸಭೆಗಳು ಸಮಾರಂಭಗಳನ್ನು ನಿಷೇಧಿಸಿದ್ದು ಈಗಾಗಲೇ ಐತಿಹಾಸಿಕ ಕ್ಷೇತ್ರಗಳ ಜಾತ್ರೆಗಳನ್ನು ರದ್ದುಮಾಡಿದೆ.
ಅದೇ ರೀತಿಯಾಗಿ ಗುಂಪುಗೂಡಿ ಪ್ರಾರ್ಥಿಸುವುದನ್ನು ನಿಷೇಧಿಸಲಾಗಿದ್ದು ಇಂದು ಮುಸ್ಲಿಂಬಾಂಧವರ ಪವಿತ್ರ ರಂಜಾನ್ ಹಬ್ಬವಾಗಿರುವುದರಿಂದ ಪ್ರತಿವರ್ಷ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ನಿಮಿತ್ತ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದರು.
ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟಲು ಇಡಿ ವಿಶ್ವವೇ ಹರಸಾಹಸ ಮಾಡುತ್ತಿದ್ದು, ಇದರ ಪರಿಣಾಮವಾಗಿ ಸಾಮೂಹಿಕ ಪ್ರಾರ್ಥನೆ ನಿಷೇಧಿಸಿರುವುದರಿಂದ ಈದ್ಗಾ ಮೈದಾನದಲ್ಲಿ ಪೊಲೀಸ್ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.
ಇದರಿಂದ ತಾಲೂಕಿನ ಎಲ್ಲಾ ಮುಸ್ಲಿಂ ಬಾಂಧವರು ತಮ್ಮ ಮನೆಗಳಲ್ಲಿಯೇ ಕುಟುಂಬಸ್ಥರೊಂದಿಗೆ ಪ್ರಾರ್ಥನೆ ಸಲ್ಲಿಸಿದರು.
ಈದ್ಗಾಮೈದಾನದಲ್ಲಿ ನಗರ ಠಾಣೆಯ ಪಿಎಸ್ಐ ಚಂದ್ರಕಾಂತ್ ಮೆಕಾಲೆ ಮತ್ತು ಸಿಬ್ಬಂದಿ ವರ್ಗದವರು ಭದ್ರತಾ ವ್ಯವಸ್ಥೆಯಲ್ಲಿ ಉಪಸ್ಥಿತರಿದ್ದರು.
Be the first to comment