ಬಾಗಲಕೋಟೆ: ಜಿಲ್ಲೆಯಲ್ಲಿ ಕೋವಿಡ್-19 ಲಾಕ್ ಡೌನ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾಗಿರುವ 2019-20 ನೇ ಸಾಲಿನಲ್ಲಿ ಮುಸುಕಿನ ಜೋಳ (ಗೋವಿನ ಜೋಳ) ಬೆಳೆದ ರೈತರಿಗೆ ರೂ. 5000 ರಂತೆ ಆರ್ಥಿಕ ನೆರವುವನ್ನು ಜಮೆ ಮಾಡಲು ಇಲ್ಲಿಯವರೆಗೆ ಏಕ ಮಾಲಿಕತ್ವದ ಭೂ ಹಿಡುವಳಿ ಇರುವ ಒಟ್ಟು 25,920 ರೈತರಿಗೆ ನೇರ ನಗದು ವರ್ಗಾವಣೆ ಮೂಲಕ ಜಮಾ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿರುತ್ತದೆ.
ಜಂಟಿ ಖಾತೆ ಭೂ ಹಿಡುವಳಿ ಹೊಂದಿದ ರೈತರ ಪಟ್ಟಿಯನ್ನು ರೈತ ಸಂಪರ್ಕ ಕೇಂದ್ರದಲ್ಲಿ ಪ್ರದರ್ಶಿಸಲಾಗಿರುತ್ತದೆ. ಜಂಟಿ ಖಾತೆಯಾಗಿದ್ದಲ್ಲಿ ಇತರೆ ಖಾತೆದಾರರ ಒಪ್ಪಿಗೆ ಪತ್ರ ಪಡೆದು ಸಲ್ಲಿಸಿದಲ್ಲಿ, ಸದರಿ ರೈತರ ಖಾತೆಗೆ ರೂ. 5000/- ಆರ್ಥಿಕ ನೆರವು ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ರೈತ ಸಂಪರ್ಕ ಕೇಂದ್ರ ಮತ್ತು ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳಿಗೆ ಭೇಟಿ ನೀಡಬಹುದಾಗಿದೆ.
Be the first to comment