ಪೊಲೀಸ್ ಸಿಬ್ಬಂದಿ ಪ್ರಾಮಾಣಿಕತೆಗೆ ಸೆಲ್ಯೂಟ್.

ವರದಿ: ಶರಣಪ್ಪ ಬಾಗಲಕೋಟೆ

ಬಾಗಲಕೋಟೆ:ಜಿಲ್ಲೆಯ ಕಲಾದಗಿ ಗ್ರಾಮದಲ್ಲಿ ಕೊರೊನಾ ನಿಯಂತ್ರಣಕ್ಕಾಗಿ ಸೀಲ್ ಡೌನ್ ಘೋಷಣೆ ಮಾಡಲಾಗಿದ್ದು,ಬ್ಯಾರಿಕೇಡ್ ಹಾಕಿ ಜನರ ಓಡಾಟಕ್ಕೆ ಕಡಿವಾಣ ಹಾಕಿದ್ದಾರೆ. ಇಂತಹ ಸಮಯದಲ್ಲಿ ಕಲಾದಗಿಯ ಪೊಲೀಸ್ ಸಿಬ್ಬಂದಿಯ ಪ್ರಾಮಾಣಿಕತೆ ಎಲ್ಲರ ಗಮನ ಸೆಳೆದಿದೆ.ಕಲಾದಗಿ ಗ್ರಾಮದ ಸೀಲ್ ಡೌನ್ ಪ್ರದೇಶದಲ್ಲಿ ಮಳೆ ಮಧ್ಯೆಯೂ ಸೀಲ್ ಡೌನ್ ಆಗಿರೋ ಪ್ರದೇಶದಲ್ಲಿ ಬ್ಯಾರಿಕೇಡ್ ಹಾಕಿರುವ ರಸ್ತೆಯಲ್ಲಿ ಛತ್ರಿ ಹಿಡಿದು ಕತ೯ವ್ಯ ನಿರ್ವಹಿಸಿದ ಕಲಾದಗಿ ಪೋಲಿಸ್ ಠಾಣೆಯ ಕಾನಸ್ಟೇಬಲ್ ಮಾರುತಿ.

ಇವರ ಕರ್ತವ್ಯಕ್ಕೆ ಮೆಚ್ಚಿ ರಾಜ್ಯ ಸರಕಾರದ ಉಪ ಮುಖ್ಯ ಮಂತ್ರಿಗಳಾದ ಗೋವಿಂದ ಕಾರಜೋಳ ಮತ್ತು ಬಾಗಲಕೋಟೆಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್.ಭ.ಜಗಲಾಸರ್ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಪ್ರಶಂಸನಾ ಪತ್ರ ನೀಡಿದ್ದಾರೆ. ಪೊಲೀಸ್ ಸಿಬ್ಬಂದಿ ಕಾರ್ಯಕ್ಕೆ ಜನರು ಸಹ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Be the first to comment

Leave a Reply

Your email address will not be published.


*