ಬಂಗಾರಪೇಟೆ ತಹಶಿಲ್ದಾರರ ಹತ್ಯೆ ಖಂಡಿಸಿ ಸಾಂಕೇತಿಕ ಪ್ರತಿಭಟನೆ:ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಇಳಕಲ್.

ವರದಿ: ಶರಣಪ್ಪ ಬಾಗಲಕೋಟೆ

ಬಾಗಲಕೋಟೆ:ಬಂಗಾರಪೇಟೆ ತಾಲೂಕಾ ತಹಶಿಲ್ದಾರರಾಗಿದ್ದ ಬಿ.ಕೆಚಂದ್ರಮೌಳೇಶ್ವರರ ಬೀಕರ ಹತ್ಯೆ ಹಿನ್ನೆಲೆಯಲ್ಲಿ ಕಠಿಣ ಕಾನೂನು ರೂಪಿಸಿ ಸರ್ಕಾರಿ ಅಧಿಕಾರಿ/ನೌಕರರಿಗೆ ಅಗತ್ಯ ರಕ್ಷಣೆ ನೀಡುವ ಕುರಿತು ಮುಖ್ಯ ಕಾರ್ಯದರ್ಶಿಗಳು ಕರ್ನಾಟಕ ಸರ್ಕಾರ ವಿಧಾನಸೌಧ ಬೆಂಗಳೂರು ಇವರಿಗೆ ಇಳಕಲ್ಲ ತಹಶಿಲ್ದಾರರಾದ ವೇದವ್ಯಾಸ ಮುತಾಲಿಕ್ ರವರ ಮುಖಾಂತರ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ತಾಲೂಕಾ ಶಾಖೆ ಇಳಕಲ್ ನ ಅಧ್ಯಕ್ಷರಾದ ಪರಶುರಾಮ ಪಮ್ಮಾರ ನೇತೃತ್ವದಲ್ಲಿ ಸಂಘದ ಎಲ್ಲ ಸದಸ್ಯರು ಸೇರಿ ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ ಮಾಡುವುದರ ಮೂಲಕ ಮನವಿ ಸಲ್ಲಿಸದರು.ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕು ತಹಶೀಲ್ದಾರರಾಗಿದ್ದ ದಿವಂಗತ ಬಿ.ಕೆ.ಚಂದ್ರಮೌಳೇಶ್ವರ ಇವರು ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಹೋಬಳಿ ತೋಪನಹಳ್ಳಿ ಗ್ರಾಮದ ರಾಮಮೂರ್ತಿ ಹಾಗೂ ವೆಂಕಟಪತಿ ಎಂಬುವವರ ಜಮೀನಿನ ವ್ಯಾಜ್ಯದ ಸಂಬಂಧ ಪೊಲೀಸರ ಕ್ಷಣೆಯಲ್ಲಿ ಜಂಟಿ ಸರ್ವೆ ಕಾರ್ಯ ನಿರತ ರಾಗಿದ್ದ ಸಂದರ್ಭದಲ್ಲಿ ಆರೋಪಿ ವೆಂಕಟಪತಿ ಅವರು ಪೊಲೀಸರ ಸಮ್ಮುಖದಲ್ಲಿ ಏಕಾಏಕಿ ಚಾಕುವಿನಿಂದ ಇರಿದು ಹತ್ಯೆಗೈದಿರುವ ಈ ಕೃತ್ಯವನ್ನು ಸಮಸ್ತ ರಾಜ್ಯ ಸರ್ಕಾರಿ ನೌಕರರು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ತೀವ್ರವಾಗಿ ಖಂಡಿಸುತ್ತದೆ.ರಾಜ್ಯಾದ್ಯಂತ ಸರಕಾರಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಇಂತಹ ಘಟನೆಗಳು ಆಗಿಂದಾಗ್ಗೆ ಸಂಭವಿಸುತ್ತಿದ್ದು ಅದರಲ್ಲೂ ಕ್ಷೇತ್ರ ಇಲಾಖೆಗಳಾದ ಕಂದಾಯ, ಭೂಮಾಪನ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಹಲವು ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಮೇಲೆ ಇಂತಹ ಹಲ್ಲೆ ದೌರ್ಜನ್ಯಗಳು ನಡೆಯುತ್ತಿವೆ.

ರಾಜ್ಯ ಸರ್ಕಾರದ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಕಾರ್ಯಾಂಗ ಕ್ಷೇತ್ರದ ಅಧಿಕಾರಿ/ನೌಕರರ ವರ್ಗ ಆತಂಕ ಹಾಗೂ ಭಯದಿಂದ ಕರ್ತವ್ಯ ನಿರ್ವಹಿಸುವ ವಾತಾವರಣ ಸೃಷ್ಟಿಯಾಗುತ್ತಿವೆ.ರಾಜ್ಯದಲ್ಲಿ ಕಠಿಣ ಕಾನೂನುಗಳು ಜಾರಿಯಲ್ಲಿರದ ಕಾರಣ ಇಂತಹ ಕೃತ್ಯಗಳು ಮರುಕಳಿಸುತ್ತಿದ್ದು, ಇಂತಹ ಪರಿಸ್ಥಿತಿಗಳು ಮರುಕಳಿಸದಂತೆ ಕಠಿಣ ಕಾನೂನುಗಳನ್ನು ರಾಜ್ಯ ಸರ್ಕಾರ ರೂಪಿಸುವುದು ಅತ್ಯಂತ ಅವಶ್ಯಕವಾಗಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರವು ಇಂತಹ ಕೃತ್ಯ ಎಸಗುವ ಅಪರಾಧಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸುವುದು, ರಾಜ್ಯದ ನೌಕರರು ನಿರ್ಭೀತಿಯಿಂದ ಕಾರ್ಯನಿರ್ವಹಿಸುವ ವಾತಾವರಣ ನಿರ್ಮಾಣ ಮಾಡಲು ಅಗತ್ಯ ರಕ್ಷಣಾ ಕ್ರಮಗಳನ್ನು ಕೈಗೊಳ್ಳುವುದು, ಕುಟುಂಬಕ್ಕೆ ಸರ್ಕಾರದಿಂದ ಗರಿಷ್ಠಮಟ್ಟದ ಪರಿಹಾರವನ್ನು ನೀಡುವುದು,ಮೃತರ ಕುಟುಂಬದ ಸದಸ್ಯರೊಬ್ಬರಿಗೆ ಅನುಕಂಪದ ಆಧಾರದ ನೇಮಕಾತಿ ನೀಡುವುದು, ಮೃತರ ಕುಟುಂಬಕ್ಕೆ ಸರ್ಕಾರದಿಂದ ದೊರೆಯಬೇಕಾದ ಎಲ್ಲಾ ಸೌಲಭ್ಯಗಳನ್ನು ಶೀಘ್ರವಾಗಿ ಬಿಡುಗಡೆ ಮಾಡುವುದು ಹೀಗೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪರಶುರಾಮ ಎಸ್ ಪಮ್ಮಾರ
ಅಧ್ಯಕ್ಷರು,ಈಶ್ವರ ಗಡ್ಡಿ ರಾಜ್ಯ ಪರಿಷತ್ ಸದಸ್ಯರು
ಶರಣಪ್ಪ ಗಡೇದ,ಗೌರವಾಧ್ಯಕ್ಷರು
ಗುಂಡಪ್ಪ ಕುರಿ,ಶ್ರೀ R R ಸಂದಿಮನಿ,ಶ್ರೀ ಶರಣಬಸು ಕೊಣ್ಣೂರ, ಶ್ರೀ ನವೀನ ಬಲಕುಂದಿ, ಶ್ರೀ ಮಹಾಂತೇಶ ಕಲ್ಮಠ,ಶ್ರೀ ಎಸ್ ಡಿ ಮಲಗಿಹಾಳ, ಎಸ್ ಜಿ ಬಂಗಾರಿ,ಕೆ ಎಸ್ ಹೊಂಗಲ್,ಎಂ ಎಸ್ ಬೀಳಗಿ,ಶ್ರೀಧರ ವಿಶ್ವಕರ್ಮ,ಶ್ರೀಮತಿ ಗುರುವಿನಮಠ, ಶ್ರೀಮತಿ ನಯನಾ ಕಾಟವಾ,ಶ್ರೀಮತಿ ಸುಧಾರಾಣಿ ರವರು ಹಾಗೂ ಪದಾಧಿಕಾರಿಗಳು, ನೌಕರರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*