ಕೆಮ್ಮು, ನೆಗಡಿ, ಜ್ವರ, ಉಸಿರಾಟದ ಲಕ್ಷಣಗಳಿದ್ದಲ್ಲಿ ತಕ್ಷಣ ಆಸ್ಪತ್ರೆಯಲ್ಲಿ ಪರೀಕ್ಷಿಸಿಕೊಳ್ಳಲು ಡಿಸಿ ಸೂಚನೆ.

ವರದಿ: ಶರಣಪ್ಪ ಬಾಗಲಕೋಟೆ

ಬಾಗಲಕೋಟೆ: ಜ್ವರ, ಕೆಮ್ಮು, ಸೀತ, ನೆಗಡಿ, ಉಸಿರಾಟದ ತೊಂದರೆ, ಮೈ-ಕೈ ನೋವು ಇದ್ದವರು ಮನೆಯಲ್ಲಿಯೇ ಅಥವಾ ಆರ್.ಎಂ.ಪಿ ವೈದ್ಯರಲ್ಲಿ ಚಿಕಿತ್ಸೆ ಪಡೆಯದೇ ತಕ್ಷಣ ಸರ್ಕಾರಿ ಆಸ್ಪತ್ರೆಗಳಿಗೆ ತರೆಳಿ ಚಿಕಿತ್ಸೆ ಪಡೆಯುವಂತೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಈ ತರಹದ ಲಕ್ಷಣಗಳಿರುವವರು ತಡವಾಗಿ ಆಸ್ಪತ್ರೆಗೆ ಬರುವುದರಿಂದ ಕೋವಿಡ್-19 ರೋಗವು ಇದ್ದವರಿಗೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದಾಗಿಯೂ ಫಲಕಾರಿಯಾಗದೇ ರೋಗಿಗಳ ಪರಿಸ್ಥಿತಿ ಗಂಭೀರವಾಗುವ ಹೆಚ್ಚಿನ ಸಾಧ್ಯತೆ ಇರುದರಿಂದ ಆದಷ್ಟು ಬೇಗನೇ ಕೆಮ್ಮು, ನೆಗಡಿ, ಜ್ವರ, ಉಸಿರಾಟದ ತೊಂದರೆ ಲಕ್ಷಣಗಳು ಕಂಡುಬಂದಲ್ಲಿ ಕೂಡಲೇ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.

Be the first to comment

Leave a Reply

Your email address will not be published.


*