ಬಾಗಲಕೋಟೆ:ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಿಂದ 2020 21 ನೇ ಸಾಲಿನಲ್ಲಿ ಮಡಿವಾಳ ಸಮಾಜಕ್ಕೆ ಸೇರಿದ ಅಗಸ, ಚಕಲ, ಧೋಬಿ, ಮಡಿವಾಳ, ಮನ್ನನ್, ಪರಿತ್, ರಾಜಕ, ಸಕಲ, ವನ್ನನ್, ವೆಲ್ಲುತೇಡನ್,ಸಾಕಲವಾಡು ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿಯಲ್ಲಿ ಸಾಲ ಮತ್ತು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
1) ಸಾಂಪ್ರದಾಯಿಕ ವೃತ್ತಿ ದಾರರ ಸಾಲ ಯೋಜನೆ.
2) ಸ್ವಯಂ ಉದ್ಯೋಗ ಸಾಲ ಯೋಜನೆ.
3) ಸ್ವಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ ಯೋಜನೆ.
4) ಅರಿವು ಶೈಕ್ಷಣಿಕ ಸಾಲ ಯೋಜನೆ.
5) ಗಂಗಾ ಕಲ್ಯಾಣ ನೀರಾವರಿ ಯೋಜನೆಗಳಲ್ಲಿ ಸಾಲ ಮತ್ತು ಸಹಾಯಧನ ಸೌಲಭ್ಯ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಚಿಸುವ ಈ ಮೇಲ್ಕಂಡ ಸಮಾಜದವರು ಉಚಿತವಾಗಿ ಅರ್ಜಿ ನಮೂನೆಯನ್ನು ಜಿಲ್ಲಾ ಕಚೇರಿಯಲ್ಲಿ ಅಥವಾ ನಿಗಮದ ವೆಬ್ ಸೈಟ್ ನಲ್ಲಿ ಪಡೆದು ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ , ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಜೆರಾಕ್ಸ್ ಪ್ರತಿ, ವಿದ್ಯಾರ್ಥಿಗಳ ವ್ಯಾಸಂಗ ದಾಖಲಾತಿಗಳು, ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿದಾರರು ಹೊಂದಿರುವ ಜಮೀನಿನ ದಾಖಲಾತಿಗಳು ಮತ್ತು ಸಣ್ಣ ರೈತರ ಪ್ರಮಾಣ ಪತ್ರ ಮತ್ತು ಫೋಟೋವನ್ನು ದಾಖಲಾತಿಗಳೊಂದಿಗೆ ನಿಗಮದ www.dbcdc.karnataka.gov.in ವೆಬ್ ಸೈಟ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಲು ತಿಳಿಸಿದೆ.
ಆನ್ ಲೈನ್ ಅರ್ಜಿ ಸಲ್ಲಿಸಲು ಸಾಧ್ಯವಾಗದಿದ್ದಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ದಾಖಲಾತಿಗಳೊಡನೆ ನಿಗಮದ ಜಿಲ್ಲೆಯ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ಬಾಗಲಕೋಟೆ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಕೊ.ಸಂಖ್ಯೆ 233 ಜಿಲ್ಲಾಡಳಿತ ಭವನ ನವನಗರ ಬಾಗಲಕೋಟೆ ಕಚೇರಿಗೆ ದಿನಾಂಕ: 03-08-2020ರ ಒಳಗೆ ಸಲ್ಲಿಸುವುದು.ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 0835236216 ಗೆ ಸಂಪರ್ಕಿಸಲು ತಿಳಿಸಿದೆ.
Be the first to comment