ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ.

ವರದಿ: ಶರಣಪ್ಪ ಬಾಗಲಕೋಟೆ

ಬಾಗಲಕೋಟೆ: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 2020 21 ನೇ ಸಾಲಿನ ಸವಿತಾ ಸಮಾಜಕ್ಕೆ ಸೇರಿದ ನಾಯಿಂದ,ಪರಿಯಾಳ, ಅಂಬಟ್ಟನ್, ಬಜಂತ್ರಿ, ಬಂಡಾರಿ, ಚೌರಿಯಾ, ಹಡಪದ, ಕವುಟಿಯನ್, ಕೆಲಸಿ, ಕ್ಷೌರಿಕ, ಕ್ಷೌರಿದ್,  ಮಹಾಲೆ, ಮಂಗಲ, ಮೇಲಗಾರ, ನಾಡಿಗ, ನಾಪಿತ,ನವಲಿಗ್,ನಾವಿ,ನಯನಜ,ಕ್ಷತ್ರೀಯ,ನ್ಹಾವಿ,ವಾಜಾಂತ್ರಿ,ಸವಿತ ಕ್ಷೌರಿಕ ಜನರ ಆರ್ಥಿಕ ಅಭಿವೃದ್ಧಿಗಾಗಿ ಸಾಲ ಮತ್ತು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.1) ಸಾಂಪ್ರದಾಯಿಕ ವೃತ್ತಿ ದಾರರ ಸಾಲ ಯೋಜನೆ 

2)ಸ್ವಯಂ ಉದ್ಯೋಗ ಸಾಲ ಯೋಜನೆ

ಈ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಇಚ್ಚಿಸುವ ಈ ಮೇಲ್ಕಂಡ ಸಮಾಜದವರು ಉಚಿತವಾಗಿ ಅರ್ಜಿ ನಮೂನೆಯನ್ನು ಜಿಲ್ಲಾ ಕಚೇರಿಯಲ್ಲಿ ಅಥವಾ ನಿಗಮದ ವೆಬ್ ಸೈಟ್ ನಲ್ಲಿ ಪಡೆದು ಅರ್ಜಿಯೊಂದಿಗೆ ಜಾತಿ ಆದಾಯ ಪ್ರಮಾಣ ಪತ್ರ , ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಜೆರಾಕ್ಸ್ ಪ್ರತಿ ಮತ್ತು ಫೋಟೋವನ್ನು ದಾಖಲಾತಿಗಳೊಂದಿಗೆ ನಿಗಮದ www.dbcdc.karnataka.gov.in ವೆಬ್ ಸೈಟ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಲು ತಿಳಿಸಿದೆ.

ಆನ್ ಲೈನ್ ಅರ್ಜಿ ಸಲ್ಲಿಸಲು ಸಾಧ್ಯವಾಗದಿದ್ದಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ದಾಖಲಾತಿಗಳೊಡನೆ ನಿಗಮದ ಜಿಲ್ಲೆಯ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ಬಾಗಲಕೋಟೆ ಜಿಲ್ಲೆಯ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಕೊ.ಸಂಖ್ಯೆ 233 ಜಿಲ್ಲಾಡಳಿತ ಭವನ ನವನಗರ ಬಾಗಲಕೋಟೆ ಕಚೇರಿಗೆ

ದಿನಾಂಕ0: 3-08 2020ರ ಒಳಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ 0835236216 ಗೆ ಸಂಪರ್ಕಿಸಲು ತಿಳಿಸಿದೆ.

Be the first to comment

Leave a Reply

Your email address will not be published.


*