ಯಾದಗಿರಿ:ಇಡೀ ಜಿಲ್ಲೆಯಾದ್ಯಂತ ಲಾಕ್ ಡೌನ್ ಆದೇಶ ಮಾಡಿರುವ ಹಿನ್ನೆಲೆ ವೈಷ್ಣವಿ ಲಾಡ್ಜ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದು ರಾಜಾರೋಷವಾಗಿ ಮದ್ಯದ ವ್ಯಾಪಾರ ನಡೆಸಲಾಗುತ್ತಿತ್ತು.ಯಾದಗಿರಿ ಜಿಲ್ಲೆ ಶಹಾಪುರ ನಗರದ ವೈಷ್ಣವಿ ಲಾಡ್ಜ್ ಮೇಲೆ ದಾಳಿ ನಡೆಸಲಾಗಿದ್ದು,ಅಕ್ರಮವಾಗಿ ಮದ್ಯ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಲಾಡ್ಜ್ ಮೇಲೆ ದಾಳಿ ಮಾಡಿ 2 ಲಕ್ಷ ರೂಪಾಯಿ ಮೌಲ್ಯದ ಮದ್ಯದ ಬಾಟಲಿಗಳನ್ನು ಜಪ್ತಿ ಮಾಡುವ ಮೂಲಕ ಓರ್ವನನ್ನು ಬಂಧಿಸಲಾಗಿದೆ
ಸುರಪುರ ಉಪವಿಭಾಗದ ಡಿವೈಎಸ್ ಪಿ ವೆಂಕಟೇಶ ಹೊಗಿಬಂಡಿ ನೇತೃತ್ವದಲ್ಲಿ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಲಾಗಿದ್ದು,
ದಾಳಿ ವೇಳೆ ಪರಾರಿಯಾದ ಇಬ್ಬರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.
Be the first to comment