ಕ್ರೈಸ್ ವಸತಿ ಕಾಲೇಜುಗಳ ಫಲಿತಾಂಶ ಶೇ. 10 ರಷ್ಟು ಹೆಚ್ಚಳ : ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲು ಸೂಚನೆ

ವರದಿ:ಅಮರೇಶ ಕಾಮನಕೇರಿ

ಬೆಂಗಳೂರು: ಮುರಾರ್ಜಿ ದೇಸಾಯಿ ವಸತಿ ಕಾಲೇಜುಗಳ ಪಿಯುಸಿ ಫಲಿತಾಂಶವು ಕಳೆದ ವರ್ಷಕ್ಕಿಂತ ಶೇ. 10 ರಷ್ಟು ಹೆಚ್ಚಳವಾಗಿದ್ದು, ವಸತಿ ಕಾಲೇಜುಗಳ ಪ್ರವೇಶಕ್ಕೆ ಕೇಂದ್ರೀಕೃತ ಆನ್ ಲೈನ್ ಅರ್ಜಿ ಆಹ್ವಾನಿಸಲು ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಸೂಚಿಸಿದ್ದಾರೆ.

ಕೊರೊನಾ ಸೋಂಕಿನ ನಡೆಯುವೆಯೂ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶವು ಅತ್ಯುತ್ತಮವಾಗಿ ಬಂದಿದ್ದು, ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ 66 ಮುರಾರ್ಜಿ ದೇಸಾಯಿ ವಸತಿ ಕಾಲೇಜುಗಳ ವಿದ್ಯಾರ್ಥಿಗಳು ಶೇ. 86.4 ರಷ್ಟು ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಅವರಲ್ಲಿ ಶೇ. 75.3 ರಷ್ಟು ವಿದ್ಯಾರ್ಥಿಗಳು ಡಿಸ್ಟಿಂಗ್ಷನ್ ಮತ್ತು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 422 ವಿದ್ಯಾರ್ಥಿಗಳು ಡಿಸ್ಟಿಂಗ್ಷನ್‍ನಲ್ಲಿ ಉತ್ತೀರ್ಣರಾಗಿದ್ದಾರೆ. 1809 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಗಣಿತ ಮತ್ತಿತರ ಪ್ರಮುಖ ವಿಷಯಗಳಲ್ಲಿ 72 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಸಿದ್ದಾರೆ. 11 ಕಾಲೇಜುಗಳಲ್ಲಿ ಶೇ. 100 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕಳೆದ ವರ್ಷ ಶೇ.76.4 ರಷ್ಟು ಫಲಿತಾಂಶ ಬಂದಿತ್ತು. ವಸತಿ ಕಾಲೇಜುಗಳ ಫಲಿತಾಂಶವು ರಾಜ್ಯದ ಒಟ್ಟಾರೆ ಪಿಯುಸಿ ಫಲಿತಾಂಶಕ್ಕಿಂತ ಶೇ. 25. ರಷ್ಟು ಹೆಚ್ಚಳವಾಗಿದೆ. ಪ್ರಥಮ ಪಿಯುಸಿ ಆರಂಭದಿಂದಲೇ ಸಿಇಟಿ/ ನೀಟ್/ಜೆಇಇ ಮತ್ತಿತರ ಪರೀಕ್ಷೆಗಳಿಗೆ ಡಿಜಿಟಲ್ ಆಧಾರಿತ ತರಬೇತಿ ನೀಡಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಸತಿ ಶಾಲೆಗಳ ವಿದ್ಯಾರ್ಥಿಗಳು ವಸತಿ ಕಾಲೇಜುಗಳಲ್ಲಿ ತಮ್ಮ ವ್ಯಾಸಂಗ ಮುಂದುವರೆಸಿ, ಕೀರ್ತಿ ತರಬೇಕು ಎಂದು ಡಿಸಿಎಂ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*