ಜಿಲ್ಲೆಯಾದ್ಯಂತ 12 ಕೋವಿಡ್ ಕೇರ್ ಸೆಂಟರ್ ಸ್ಥಾಪನೆ

ವರದಿ: ಶರಣಪ್ಪ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ:

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತಾಲಯದ ಪರಿಷ್ಕೃತ ಮಾರ್ಗಸೂಚಿಗಳನ್ವಯ ಜಿಲ್ಲೆಯಾದ್ಯಂತ 12 ಕೋವಿಡ್ ಕೇರ್ ಸೆಂಟರ್‍ಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಬಾಗಲಕೋಟೆಯ ನವನಗರದ ಸೆಕ್ಟರ ನಂ.46 ರಲ್ಲಿರುವ ಅಲ್ಪಸಂಖ್ಯಾತ ಇಲಾಖೆಯ ಅಧೀನದಲ್ಲಿ ಬರುವ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ, ಬಾಲಕಿಯರ ಪದವಿ ಪೂರ್ವ ಮಹಾವಿದ್ಯಾಲಯದ, ಎಂಡಿಆರ್‍ಎಸ್ ಬಾಲಕಿಯರ ವಿಭಾಗ, ಬಾಲಕಿಯರ ವಸತಿ ನಿಲಯ, ಹಿರೇಮುಚ್ಚಳಗುಡ್ಡದ ಆರ್.ಎಂ.ಎಸ್ ಶಾಲೆ, ಇಲಕಲ್ಲ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ, ಬೀಳಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಬನಹಟ್ಟಿಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ, ಹುನಗುಂದ ಬಿ.ವಿ.ವ ಸಂಘಧ ಸಿ.ವಿ.ಚರಂತಿಮಠ ಪಾಲಿಟೆಕ್ನಿಕ್ ಕಾಲೇಜ, ಗುಳೇದಗುಡ್ಡದ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ, ಜಮಖಂಡಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ, ಮುಧೋಳನ ಗಿರಿರಾಂವ ಆರ್.ಸಿಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದೆ.

ಜಿಲ್ಲೆಯಲ್ಲಿ ಸ್ಥಾಪಿಸಲಾದ ಕೋವಿಡ್ ಕೇರ್ ಸೆಂಟರಗಳ ನಿರ್ವಹಣೆಗೆ ವಿವಿಧ ಇಲಾಖೆಗೆ ಜವಾಬ್ದಾರಿ ನೀಡಲಾಗಿದೆ. ಅಲ್ಲದೇ ತಾಲೂಕಾ ಅಧಿಕಾರಿಗಳನ್ನು ಮೇಲ್ವಿಚಾರಣೆಗೆ ನೇಮಿಸಲಾಗಿದೆ. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಂಬಂಧಪಟ್ಟ ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ಎಸ್‍ಓಪಿಮಾರ್ಗಸೂಚಿಯನ್ವಯ ನಿಯಮಗಳನ್ನು ಪಾಲಿಸಲು ಸೂಚಿಸಲಾಗಿದೆ.

ಅಡುಗೆ ಸಿಬ್ಬಂದಿಯರಿಂದ ಶುಚಿತ್ವದ ಅಡುಗೆ ತಯಾರಿಸಿ ಆರೈಕೆ ಪಡೆಯುತ್ತಿರುವ ಸೋಂಕಿತರಿಗೆ ಪೂರೈಸಲಾಗುವುದು. ಆರೈಕೆ ಪಡೆಯುತಿರುವ ಸೋಂಕಿತರಿಗೆ ಕುಡಿಯಲು ಶುದ್ದ ನೀರು, ಬಿಸಿನೀರು ಹಾಗೂ ಸ್ನಾನಕ್ಕೆ ಬಿಸಿನೀರಿ ವ್ಯವಸ್ಥೆ, ಅವಶ್ಯಕ ದಿನಬಳಕೆಯ ಸೋಪ್ ಹಾಗೂ ಇನ್ನೀತರ ಸಾಮಗ್ರಿಗಳನ್ನು ಒದಗಿಸಲಾಗುತ್ತಿದೆ. ಸೋಂಕಿತರಿಗೆ ಮಾಸ್ಕ ಪೂರೈಸಿ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಬಗ್ಗೆ ಕ್ರಮವಹಿಸಲಾಗುತ್ತದೆ. ಆರೋಗ್ಯ ಪಡೆಯುತ್ತಿರುವ ಸೋಂಕಿತರ ಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಸಿಬ್ಬಂದಿಗಳನ್ನು ನೇಮಿಸಿ ಮೇಲಿಂದ ಮೇಲೆ ತಪಾಸಣೆ, ಸಮಯಕ್ಕೆ ಸರಿಯಾಗಿ ಔಷಧಿ ಪೂರೈಕೆ ಮಾಡಿ ಆರೋಗ್ಯದ ಮೇಲೆ ನಿಗಾ ವಹಿಸಲಾಗುತ್ತದೆ.

ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಸಂಗ್ರಹವಾಗುವ ಘನತ್ಯಾಜ್ಯವನ್ನು ಪ್ರತಿದಿನ ತೆಗೆದು ವಿಲೇವಾರಿಗೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಯ ಮುಖ್ಯಾಧಿಕಾರಿಗಳು ಕ್ರಮವಹಿಸುವರು. ಕೇರ್ ಸೆಂಟರ್‍ಗಳಿಗೆ ಸ್ಯಾನಿಟೈಜರ್ ಮಾಡುವುದು ಹಾಗೂ ಸ್ವಚ್ಛತೆಯನ್ನು ಕಾಪಾಡುವ ಜವಾಬ್ದಾರಿ ವಹಿಸಲಾಗಿದೆ. ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಕೋವಿಡ್ ಕೇರ್ ಸೆಂಟರ್‍ಗಳಿಗೆ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲಾಗುವುದು. ಅಲ್ಲದೇ ತಹಶೀಲ್ದಾರರು ಮೇಲಿಂದ ಮೇಲೆ ಭೇಟಿ ನೀಡಿ ಅಲ್ಲಿನ ಕುಂದು ಕೊರತೆಗಳನ್ನು ಅವಲೋಕಿಸಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*