ಯಾದಗಿರಿ: ಸುರಪುರದ ಹಿರಿಯ ರಾಜಕಾರಿಣಿ ಮಾಜಿ ಸಚಿವ ರಾಜಾ ಮದನಗೋಪಾಲನಾಯಕ ಅವರು ಇಂದು ಕಲಬುರಗಿಯ ಇಎಸ್ಐ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.ವಾರದ ಹಿಂದೆ ಅವರಿಗೆ ಕೊರಾನಾ ಪಾಸಿಟಿವ್ ಕಾಣಿಸಿಕೊಂಡಿತ್ತು.
ಅವರನ್ನು ಕಲಬುರಗಿಯ ಇಎಸ್ಐ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.ರಾಜಾ ಮದನಗೋಪಾಲ ನಾಯಕ ಅವರು 1983ರಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಪ್ರಥಮ ಬಾರಿಗೆ ಗೆಲುವು ಸಾಧಿಸಿದರು, ನಂತರ 1985 ರಲ್ಲಿ ನಡೆದ ಚುನಾವಣೆಯಲ್ಲಿ ಎರಡನೇ ಬಾರಿಗೆ ಗೆಲುವು ಸಾಧಿಸಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ ಅವರ ಸಂಪುಟದಲ್ಲಿ ಕೃಷಿ ಸಚಿವರಾಗಿದ್ದರು.
ನಂತರ 1989 ರಲ್ಲಿ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು. ರಾಯಚೂರ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಕೇವಲ 501 ಮತಗಳ ಅಂತರದಿಂದ ಸೋಲುನುಭವಿಸಿದರು.ಕಾಂಗ್ರೇಸ್ ತೊರೆದು ಬಿಜೆಪಿಯಿಂದ ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸಿ ಸೋಲುನುಭವಿಸಿದರು.
ಸುರಪುರದ ಕನ್ನಡ ಸಾಹಿತ್ಯ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಮತ್ತು ರಿಕ್ರೇಯೆಷನ್ ಕ್ಲಬ್ ಅಧ್ಯಕ್ಷರಾಗಿದ್ದರು.ಮದನಗೋಪಾಲ ನಾಯಕ ಅವರು ಕ್ರೀಡೆ ಹಾಗೂ ಸಾಹಿತ್ಯ ಚಟುವಟಿಕೆಯಲ್ಲಿ ಹೆಚ್ಚಿನ ಆಸ್ತಕಿ ಹೊಂದಿದ್ದರು.
Be the first to comment