ಸಿಇಟಿ ಪರೀಕ್ಷೆ ಬರೆದ ಕೊರೊನಾ ಸೊಂಕಿತ ವಿದ್ಯಾರ್ಥಿ: ಜಿಲ್ಲಾಡಳಿತದಿಂದ ಸಕಲ ವ್ಯವಸ್ಥೆ.

ವರದಿ: ಶರಣಪ್ಪ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

 ಬಾಗಲಕೋಟೆ:

ನವನಗರದ ಅಲ್ಪಸಂಖ್ಯಾತರ ವಸತಿ ನಿಲಯದಲ್ಲಿ ಸ್ಥಾಪಿಸಲಾದ ಪರೀಕ್ಷಾ ಕೇಂದ್ರದಲ್ಲಿ ಓರ್ವ ಕೊರೊನಾ ಸೋಂಕಿತ ವಿದ್ಯಾರ್ಥಿ ಸಿಇಟಿ ಪರೀಕ್ಷೆ ಬರೆದಿದ್ದು ಕೊರೊನಾ ಸೋಂಕಿತ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಜಿಲ್ಲಾಡಳಿತದಿಂದ ಸಕಲ ವ್ಯವಸ್ಥೆ ಮಾಡಲಾಗಿತ್ತು.

ಸೋಂಕಿತ ವಿದ್ಯಾರ್ಥಿಗಳಿಗೆಂದೆ ನವನಗರದ ಅಲ್ಪಸಂಖ್ಯಾತರ ವಸತಿ ನಿಲಯದಲ್ಲಿ ಸ್ಥಾಪಿಸಲಾದ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಯನ್ನು ಕರೆತರುವಲ್ಲಿ ಪಿಪಿಇ ಕಿಟ್, ಮಾಸ್ಕ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮ ನಿರ್ವಹಸುವುದರೊಂದಿಗೆ ಪರೀಕ್ಷಾ ಕೊಠಡಿ ಮೇಲ್ವಿಚಾರಕರಿಗೆ ಸುರಕ್ಷಿತ ಪಿಪಿಇ ಕಿಟ್ ವ್ಯವಸ್ಥೆ ಮಾಡಲಾಗಿತ್ತು.

Be the first to comment

Leave a Reply

Your email address will not be published.


*