ಬಕ್ರಿದ್ ಹಬ್ಬದಂದು ಸರಕಾರದ ಮಾರ್ಗಸೂಚನೆ ಪಾಲನೆ ಕಟ್ಟುನಿಟ್ಟು

ವರದಿ: ಚೇತನ ಕೆಂದೂಳಿ, ಸುದ್ದಿ ಸಂಪಾದಕರು

ರಾಜ್ಯ ಸುದ್ದಿ:

ಆಗಸ್ಟ್ 01 ರಂದು ಬಕ್ರಿದ್ ಹಬ್ಬ ಆಚರಿಸಲಾಗುತಿದ್ದು ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಸರ್ಕಾರವು ನಿರ್ಬಂಧ ಹೇರಲಾಗಿದ್ದು ಈ ನಿಟ್ಟನಲ್ಲಿ ಮುಸ್ಲಿಮರು ಸರ್ಕಾರದ ಮಾರ್ಗಸೂಚಿ ಪಾಲಿಸಿ ಸಹಕರಿಸಬೇಕಾಗಿದೆ ಎಂದು ತಿಳಿದು ಬಂದಿದೆ. 

ಮಸೀದಿಗಳಲ್ಲಿ ಒಂದು ಬಾರಿಗೆ 50 ಜನರು ಮಾತ್ರ ಸಾಮೂಹಿಕವಾಗಿ ಪ್ರಾರ್ಥನೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಅಧಿಕ ಜನರು ಬಂದಲ್ಲಿ ಎರಡು ಅಥವಾ ಮೂರು ಬ್ಯಾಚ್ ಗಳಲ್ಲಿ ಪ್ರಾರ್ಥನೆ ಮಾಡುವಂತೆ ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಹಜ್ ಹಾಗು ವಕ್ಫ್ ಇಲಾಖೆ ಸೂಚಿಸಿದೆ ಎಂದು ತಿಳಿಸಿದ್ದಾರೆ.

ಮಸೀದಿಗಳನ್ನು ಹೊರತು ಪಡಿಸಿ ಸಭಾಂಗಣ,ಸಮುದಾಯ ಭವನ,ಶಾದಿ ಮಹಲ್ ಮತ್ತಿತರ ಜಾಗಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧಿಸಲಾಗಿದೆ. ಮುಸ್ಲಿಮರು ಈ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.

ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆಗೆ ಮೊದಲು ಆಡಳಿತ ಮಂಡಳಿಗಳು ಈ ಮಾರ್ಗಸೂಚಿಗಳನ್ನು ಅನುಸರಿಸಲು ಸೂಚಿಸಲಾಗಿದೆ.

  • ಪ್ರಾರ್ಥನಾ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು.
  • 60 ವರ್ಷ ವಯಸ್ಸು ಮೆಲ್ಪಟ್ಟ ವ್ಯಕ್ತಿಗಳು ಹಾಗು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಮಸೀದಿಗೆ ಬರಬಾರದು.ಇವರುಗಳು ಮನೆಯಲ್ಲೇ ನಮಾಜ್ ನಿರ್ವಹಿಸುವುದು.
  • ನಮಾಜ್ ನಿರ್ವಹಿಸುವರ ಮಧ್ಯೆ ಕನಿಷ್ಠ 6 ಅಡಿ ಅಂತರ ಕಾಯ್ದುಕೊಳ್ಳುವುದು.
  • ಮಸೀದಿಗೆ ಪ್ರವೇಶಿಸುವ ಮುನ್ನ ಪ್ರತಿಯೊಬ್ಬರೂ ತಮ್ಮ ತಮ್ಮ ದೇಹದ ತಾಪಮಾನವನ್ನು ತಪಾಸಣೆಗೆ ಒಳಪಡಿಸಬೇಕು.
  • ಕೈಗಳನ್ನು ಸೋಪಿನಿಂದ ಶುಚಿಗೊಳಿಸಿಕೊಳ್ಳಬೇಕು.
  • ಮಸೀದಿ ಒಳಗಿರುವ ಧಾರ್ಮಿಕ ಗ್ರಂಥಗಳನ್ನು ಮತ್ತು ಇತರೇ ವಸ್ತುಗಳನ್ನು ಸ್ಪರ್ಷಿಸದಿರುವುದು.
  • ಹಸ್ತಲಾಘವ ಅಥವಾ ಆಲಿಂಗನ ಮಾಡಿಕೊಳ್ಳದಂತೆ ನಿಗಾ ವಹಿಸುವುದು.
  • ಅಪರಿಚತರು ಮಸೀದಿಗೆ ಬಂದಲ್ಲಿ ಅವರ ಬಗ್ಗೆ ವಿಶೇಷವಾಗಿ ಗಮನ ಹರಿಸುವುದು.

ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.



 

 

Be the first to comment

Leave a Reply

Your email address will not be published.


*