ಜಿಲ್ಲಾ ಸುದ್ದಿಗಳು
ಬಾಗಲಕೋಟೆ:
ಕೋವಿಡ್ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಆಗಸ್ಟ 22 ರಿಂದ ಸೆಪ್ಟೆಂಬರ 1ರ ವರೆಗೆ ನಡೆಯುವ ಗಣೇಶ ಉತ್ಸವದಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವುದನ್ನು ಕಲಂ 144 ಸಿ.ಆರ್.ಪಿ.ಸಿ ಅಡಿಯಲ್ಲಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.ಕೋವಿಡ್-19 ರೋಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪೆಂಡಾಲ ಹಾಕುವುದು, ಯಾವುದೇ ರೀತಿಯ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ವೇಳೆಯಲ್ಲಿ ಮೆರವಣಿಗೆ ಮಾಡುವುದು, ಸಾರ್ವಜನಿಕರು ದರ್ಶನ ಮಾಡುವ ಸಮಯದಲ್ಲಿ ಪ್ರಸಾದ, ಅನ್ನಸಂತರ್ಪಣೆ ಸಾರ್ವಜನಿಕವಾಗಿ ಹಂಚುವುದು, ಗುಂಪು ಗುಂಪಾಗಿ ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆ ಮಾಡುವುದನ್ನು ಕಲಂ 144 ಸಿ.ಆರ್.ಪಿ.ಸಿ. ಅಡಿಯಲ್ಲಿ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
Be the first to comment