ಜಿಲ್ಲಾ ಸುದ್ದಿಗಳು
ಬಾಗಲಕೋಟೆ: ಜಿಲ್ಲೆಯಲ್ಲಿ 34 ಜನ ಕೋವಿಡ್‍ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಹೊಸದಾಗಿ 168 ಕೊರೊನಾ ಪ್ರಕರಣಗಳು ಬುಧವಾರ ದೃಡಪಟ್ಟಿವೆ. ಇಬ್ಬರು ಸಾವನೊಪ್ಪಿರುವ ವರದಿಯಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2614ಕ್ಕೆ ಏರಿಕೆಯಾಗಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 1238 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಡಪಟ್ಟ ಸೋಂಕಿತರ ಪೈಕಿ ಬಾಗಲಕೋಟೆ ತಾಲೂಕಿನಲ್ಲಿ 36, ಬಾದಾಮಿ 10, ಹುನಗುಂದ 51, ಬೀಳಗಿ 4, ಮುಧೋಳ 23, ಜಮಖಂಡಿ 44 ಪ್ರಕರಣಗಳು ಕಂಡುಬಂದಿವೆ. ಜಿಲ್ಲೆಯಿಂದ ಕಳುಹಿಸಲಾದ ಒಟ್ಟು 228 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದ್ದು, ಪ್ರತ್ಯೇಕವಾಗಿ 666 ಜನ ನಿಗಾದಲ್ಲಿದ್ದಾರೆ.
ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 32656 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 29536 ನೆಗಟಿವ್ ಪ್ರಕರಣ, 2614 ಪಾಜಿಟಿವ್ ಪ್ರಕರಣ ಹಾಗೂ 52 ಜನ ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 1325 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 187 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ. ಕಂಟೈನ್ಮೆಂಟ್ ಝೋನ್ 182 ಇದ್ದು, ಇನ್‍ಸ್ಟಿಟ್ಯೂಶನ್ ಕ್ವಾಂರಂಟೈನ್‍ನಲ್ಲಿದ್ದ 8237 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಕೋವಿಡ್‍ನಿಂದ ಮೃತಪಟ್ಟವರ ವಿವರ
ಬಾದಾಮಿಯ ನಿವಾಸಿ 65 ವರ್ಷದ ಮಹಿಳೆ ಆಗಸ್ಟ 2 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಹೃದಯಾಘಾತದ ತೊಂದರೆಯಿಂದ ಆಗಸ್ಟ 5 ರಂದು ಮೃತಪಟ್ಟಿರುತ್ತಾರೆ. ಬನಹಟ್ಟಿಯ 49 ವರ್ಷದ ಪುರುಷ ಜುಲೈ 28 ರಂದು ಖಾಸಗಿ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ರಕ್ತದ ಒತ್ತಡದ ತೊಂದರೆಯಿಂದ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮೃತಪಟ್ಟಿರುತ್ತಾರೆ. ಮೃತಪಟ್ಟವರನ್ನು ಕೋವಿಡ್ ಮಾರ್ಗಸೂಚಿಯ ಪ್ರಕಾರ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ.
Be the first to comment