ಅಬ್ಬಿಹಾಳ ಗ್ರಾಮದ ಮಾರುತೇಶ್ವರ ಜಾತ್ರೆಯನ್ನು ನಿಷೇಧಿಸಿದ ಮುದ್ದೇಬಿಹಾಳ ತಾಲೂಕಾಡಳಿತ

ವರದಿ: ಚೇತನ ಕೆಂದೂಳಿ, ಸುದ್ದಿ ಸಂಪಾಕದರು

ಜಿಲ್ಲಾ ಸುದ್ದಿಗಳು

ಮುದ್ದೇಬಿಹಾಳ:

ಮುದ್ದೇಬಿಹಾಳ ತಾಲೂಕಿನ ಅಬ್ಬಿಹಾಳ ಗ್ರಾಮದಲ್ಲಿ ನಡೆಯಬೇಕಾಗಿದ್ದ ಶ್ರೀ ಮಾರುತೇಶ್ವರ ದೇವಸ್ಥಾನದ ಜಾತ್ರೆಗೆ ತಾಲೂಕಾ ಆಡಳಿತವತಿಯಿಂದ ನಿಷೇಧಿಸಲಾಗಿದೆ ಎಂದು ಸ್ಥಳೀಯ ತಹಸೀಲ್ದಾರ ಜಿ.ಎಸ್.ಮಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯಾದ್ಯಂತ ಕೊರೋನಾ ವೈರಸ್ ನಿಂದ ಆಗಬಹುದಾದ ಅನಾಹುತಗಳನ್ನು ತಪ್ಪಿಸಲು ರಾಜ್ಯ ಸರಕಾರ ಸಾರ್ವಜನಿಕರ ಸಭೆ, ಸಮಾರಂಭ, ಜಾತ್ರೆ, ಕ್ರೀಡೆ ಸೇರಿದಂತೆ ಇತ್ಯಾದಿ ಚಟುವಟಿಕೆಗಳನ್ನು  ನಿಷೇಧಿಸಿದ ಹಿನ್ನೆಲೆ ಮುದ್ದೇಬಿಹಾಳ ತಾಲೂಕಿನ ಅಬ್ಬಿಹಾಳ ಗ್ರಾಮದ ಮಾರುತೇಶ್ವರ ಜಾತ್ರೆಯನ್ನೂ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*