ಯಾದಗಿರಿಗೆ ಜಿಲ್ಲೆಗೆ ಮತ್ತೆ ಪ್ರವಾಹದ ಭೀತಿ: ಕೃಷ್ಣಾ ನದಿಗೆ 2.20 ಲಕ್ಷ ಕ್ಯೂಸೆಕ್ಸ್ ನೀರು

ವರದಿ:ರಾಘವೇಂದ್ರ ಮಾಸ್ತರ ಯಾದಗಿರಿ

ಜಿಲ್ಲಾ ಸುದ್ದಿಗಳು

ಯಾದಗಿರಿ:

ಕಳೆದ ವರ್ಷ ಪ್ರವಾಹದಿಂದ ತತ್ತರಿಸಿದ ಯಾದಗಿರಿ ಜಿಲ್ಲೆಗೆ ಮತ್ತೆ ಸಂಕಷ್ಟ ಎದುರಾಗಿದೆ. ಕೃಷ್ಣಾ ನದಿಗೆ ದಿನದಿಂದ ದಿನಕ್ಕೆ ನೀರಿನ ಪ್ರಮಾಣ ಹಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 2.20 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡಲಾಗಿದ್ದು, ಜನರು ತಮ್ಮ ಜಾನುವಾರುಗಳ ಸಹಿತ ಸುರಕ್ಷಿತ ಸ್ಥಳಕ್ಕೆ ತೆರಳುವುದರ ಜೊತೆಗೆ ಕೃಷ್ಣಾ ನದಿ ಪಾತ್ರಕ್ಕೆ ತೆರಳದಂತೆ ಜಿಲ್ಲಾಡಳಿತದಿಂದ ಸೂಚನೆ ನೀಡಲಾಗಿದೆ.

ಮಹಾರಾಷ್ಟ್ರದ ಕೊಯ್ನಾ, ಸಾಂಗ್ಲಿ, ಸೊಲ್ಲಾಪುರ ಮತ್ತಿತರ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವ ನಿಟ್ಟಿನಲ್ಲಿ ಕೃಷ್ಣೆಯ ಒಡಲು ಸಧ್ಯ ಭರ್ತಿಯಾಗಿದ್ದು ಮೈದುಂಬಿಕೊಂಡಿರುವ ಜಲಾಶಯದಿಂದ ಹೆಚ್ಚನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಜಿಲ್ಲೆಯ ಜನರಿಗೆ ಈಗ ಪ್ರವಾಹದ ಭೀತಿ ಎದುರಾಗಿದ್ದು, ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2.20 ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ನೀರಿನ ಪ್ರಮಾಣ ಇನ್ನೂ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಜಲಾಶಯದ ಅಧಿಕಾರಿಗಳು ತಿಳಿಸಿದ್ದಾರೆ.ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಗ್ರಾಮದ ಸಮೀಪವಿರುವ ಬಸವಸಾಗರ ಜಲಾಶಯ 492.25 ಮೀಟರ್ ಗರಿಷ್ಠ ಸಾಮರ್ಥ್ಯ ಹೊಂದಿದ್ದು, 33.31 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಸದ್ಯಕ್ಕೆ ಬಸವಸಾಗರ ಜಲಾಶಯದಲ್ಲಿ ಒಳಹರಿವು ಹೆಚ್ಚಳವಾದ ಹಿನ್ನೆಲೆ 491.42 ಮೀಟರ್ ನೀರು ಸಂಗ್ರಹವಾಗಿದ್ದು, 29.57 ಟಿಎಂಸಿ ನೀರು ಜಲಾಶಯದಲ್ಲಿ ಸಂಗ್ರಹವಾಗಿದೆ.ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಜಲಾಶಯದಿಂದ ಒಟ್ಟು 25 ಕ್ರಸ್ಟ್ ಗೇಟ್ ಗಳ ಮೂಲಕ ನೀರು ಬಿಡಲಾಗಿದ್ದು, ಬಸವಸಾಗರ ಜಲಾಶಯಕ್ಕೆ ಈಗ 2.20 ಸಾವಿರ ಕ್ಯೂಸೆಕ್ ಒಳಹರಿವಿದ್ದು, ಇಂದು ಬೆಳಗ್ಗೆ 22 ಕ್ರಸ್ಟ್ ಗೇಟ್​ಗಳ ಮೂಲಕ 2 ಲಕ್ಷ 20 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ನದಿಗೆ ಹರಿಬೀಡಲಾಗುತ್ತಿದೆ.

ಜಲಾಶಯದ ಒಳಹರಿವು ಹೆಚ್ಚಾದರೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲಾಗುವುದು ಎಂದು ಕೃಷ್ಣಾ ಭಾಗ್ಯ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹಾಗಾಗಿ ಜನರು ತಮ್ಮ ಜಾನುವಾರುಗಳ ಸಹಿತ ಸುರಕ್ಷಿತ ಸ್ಥಳಕ್ಕೆ ತೆರಳುವುದರ ಜೊತೆಗೆ ಕೃಷ್ಣಾ ನದಿ ಪಾತ್ರಕ್ಕೆ ತೆರಳದಂತೆ ಸೂಚನೆ ನೀಡಿದ್ದಾರೆ.

ಸದ್ಯಕ್ಕೆ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2.20 ಸಾವಿರ ಕ್ಯೂಸೆಕ್ ಹಾಗೂ ಇನ್ನೂ ಅಧಿಕ ಪ್ರಮಾಣದ ನೀರು ಬಿಟ್ಟರೆ ತೀರಾ ಪ್ರಮಾಣದ ಸಮಸ್ಯೆಯಾಗಲಿದೆ.

ನೀರಿನ ಪ್ರಮಾಣ ಹೆಚ್ಚಾದರೆ ನದಿ ಪಾತ್ರದ ಜನರು ಮತ್ತೆ 2019ರ ಪ್ರವಾಹ ಎದುರಿಸುವ ಸಾಧ್ಯತೆಗಳಿವೆ ಸಧ್ಯ ಹುಣಸಗಿ ತಾಲೂಕಿನ ಛಾಯಾ ಭಗವತಿ ದೆವಸ್ಥಾನ ಜಲಾವೃತವಾಗಿದ್ದು . ಪ್ರವಾಹ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಜಿಲ್ಲೆಯ ಸುರಪುರ, ಶಹಪುರ, ಹುಣಸಗಿ, ಹಾಗೂ ವಡಗೇರಾ ತಾಲೂಕಿನಲ್ಲಿ ಕಾಳಜಿ ಕೇಂದ್ರಗಳನ್ನು ಗುರುತಿಸುವ ಮೂಲಕ ಮುಂಜಾಗ್ರತಾ ಕ್ರಮ ಕೈಗೊಂಡಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*