ರೈತರಿಂದಲೇ ಸ್ವಯಂ ಬೆಳೆ ಸಮೀಕ್ಷೆ : ಡಿಸಿ ರಾಜೇಂದ್ರ

ವರದಿ: ಶರಣಪ್ಪ ಬಾಗಲಕೋಟೆ

ಬಾಗಲಕೋಟ: ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಇ-ಆಡಳಿತ ಇಲಾಖೆಯು ಹೊರತಂದ ನೂತನ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಮೂಲಕ ಸ್ವಯಂ ರೈತರೇ ತಾವು ಬೆಳೆದಿರುವ ಬೆಳೆಯನ್ನು ನಮೂದಿಸಲು ಆಗಸ್ಟ 24 ಕೊನೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಬೆಳೆ ಸಮೀಕ್ಷೆ ಕಾರ್ಯ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬೆಳೆ ಸಮೀಕ್ಷೆ ಯೋಜನೆಯನ್ವಯ ಜಿಲ್ಲೆಯ ರೈತರು ತಮ್ಮ ಜಮೀನಿನ ಸರ್ವೆ ನಂಬರ, ಹಿಸ್ಸಾ ನಂಬರವಾರು ತಾವು ಬೆಳೆದ ಕೃಷಿ ಬೆಳೆ ಹಾಗು ಬಹುವಾರ್ಷಿಕ ತೋಟಗಾರಿಕೆ, ಅರಣ್ಯ ಇತರೆ ಬೆಳೆ ಸಮೀಕ್ಷೆ 2020 ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ಸ್ವತಃ ತಾವೇ ಬೆಳೆ ಸಮೀಕ್ಷೆ ಮೂಲಕ ನೋಂದಾಯಿಸಬಹುದಾಗಿದೆ ಎಂದು ತಿಳಿಸಿದರು.ಬೆಳೆ ಸಮೀಕ್ಷೆ ದತ್ತಾಂಶವನ್ನು ಕೃಷಿ, ತೋಟಗಾರಿಕೆ, ರೇಷ್ಮೆ ಬೆಳೆಗಳ ವಿಸ್ತೀರ್ಣ ಲೆಕ್ಕ ಹಾಕುವ ಕಾರ್ಯದಲ್ಲಿ ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಬೆಳೆ ಹಾನಿ ಕುರಿತು ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸುವಲ್ಲಿ, ಬೆಳೆ ವಿಮಾ ಯೋಜನೆಯಡಿ ಸರ್ವೆ ನಂಬರವಾರು ಬೆಳೆ ಪರಿಶೀಲನೆ ಹಾಗೂ ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು ಸರ್ವೆ ನಂಬರ ಆಯ್ಕೆ ಮಾಡಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಈ ಬೆಳೆ ಸಮೀಕ್ಷೆಯಿಂದ ಅನುಕೂಲವಾಗಲಿದೆ ಎಂದರು. 

ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆ ಅನುಷ್ಠಾನಕ್ಕಾಗಿ ಹಾಗೂ ಆರ್.ಟಿ.ಸಿ.ಯಲ್ಲಿ ಬೆಳೆ ವಿವರ ದಾಖಲಾತಿಗಾಗಿ ಬಳಸ ಬಹುದಾಗಿದೆ. ಆದ್ದರಿಂದ ಜಿಲ್ಲೆಯ ರೈತ ಬಾಂಧವರು ತಪ್ಪದೇ ತಮ್ಮ ಜಮೀನಲ್ಲಿರುವ ಬೆಳೆಗಳ ವಿವರವನ್ನು ದಾಖಲಿಸಬೇಕು. ಗ್ರಾಮಗಳಲ್ಲಿರುವ ವಿದ್ಯಾವಂತ ಯುವಕರು ರೈತರ ಬೆಳೆ ಸಮೀಕ್ಷೆ ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ತಮ್ಮ ಹಳ್ಳಿಯ ರೈತ ಸಮೂದಾಯದ ಬೆಳೆ ಮಾಹಿತಿಯನ್ನು ದಾಖಲಿಸಲು ಸಹಕರಿಸಬೇಕು ಎಂದು ತಿಳಿಸಿದರು.
ಈ ಸಮೀಕ್ಷೆ ಕಾರ್ಯ ಆಗಸ್ಟ 24 ರೊಳಗಾಗಿ ಅಪ್‍ಲೋಡ್ ಮಾಡಲು ಕಾಲಮಿತಿ ನಿಗಧಿಪಡಿಸಲಾಗಿದೆ. ರೈತರು ನಿಗಧಿತ ಸಮಯದೊಳಗೆ ತಾವು ಬೆಳೆದ ಮಾಹಿತಿಯನ್ನು ಅಪ್‍ಲೋಡ್ ಮಾಡದೆ ಇದ್ದ ಪಕ್ಷದಲ್ಲಿ ಆಗಸ್ಟ 24 ರ ನಂತರ ಖಾಸಗಿ ನಿವಾಸಿಗಳ ಸಹಾಯದಿಂದ ತಮ್ಮ ಜಮೀನಿನಲ್ಲಿರುವ ಬೆಳೆ ಮಾಹಿತಿಯನ್ನು ದಾಖಲಿಸಬಹುದಾಗಿದೆರೀ ಕುರಿತು ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಸಹಾಯಕ ತೋಟಗಾರಿಕೆ ಅಧಿಕಾರಿಗಳು, ರೇಷ್ಮೆ ಮತ್ತು ನೀರಾವರಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ರೈತರು ತಮ್ಮ ಜಮೀನುಗಳಲ್ಲಿ ಬೆಳೆದ ಬೆಳೆಯನ್ನು ಆ್ಯಪ್‍ನಲ್ಲಿ ನಮೂದಿಸಿದನ್ನು ನೋಡಲ್ ಅಧಿಕಾರಿಗಳು ಮಾಹಿತಿ ಪಡೆದುಕೊಳ್ಳತಕ್ಕದ್ದು. ಪ್ರತಿ ಮೂರು ದಿನಗಳಿಗೊಮ್ಮೆ ಬೆಳೆ ನೋಂದಣಿಯಾದ ಪ್ರತಿಶತ ವಿವರಗಳನ್ನು ನೀಡಲು ತಿಳಿಸಿದರು. ತಹಶೀಲ್ದಾರರ ನೇತೃತ್ವದಲ್ಲಿ ಬೆಳೆ ಸಮೀಕ್ಷೆ ನಿಗದಿತ ಅವಧಿಯಲ್ಲಿ ಪೂರ್ಣಗೊಳ್ಳುವಂತೆ ನೋಡಿಕೊಳ್ಳುವ ಜವಾಬ್ದಾರಿಯಾಗಿದ್ದು, ತಾಂತ್ರಿಕ ಸಮಸ್ಯೆ ಏನೇ ಬಂದರು ಪ್ರತಿ ತಾಲೂಕಿಗೊಬ್ಬರಂದತೆ ಟೆಕ್ನಿಶಿನರ್‍ಗಳನ್ನು ನೀಡಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಜಿಲ್ಲಾ ಅಂಕಿ ಸಂಖ್ಯಾಧಿಕಾರಿ ಗಂಗಾಧರ ದಿವಟರ ಮಾತನಾಡಿ ಮಿಶ್ರ ಬೆಳೆಯನ್ನು ಸರಿಯಾಗಿ ನಮೂದು ಮಾಡಬೇಕು. ನಮೂದಾದ ಬಗ್ಗೆ ರೂಪ್ ಲೆವೆಲ್ ಮಾನಿಟರ ಆಗುವ ಅಗ್ಯವಿದೆ ಎಂದು ತಿಳಿಸಿದರು. ಸಭೆಯಲ್ಲಿ ಜಿ.ಪಂ ಸಿಇಓ ಟಿ.ಭೂಬಾಲನ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ಕೃಷಿ ಇಲಾಖೆಯ ಉಪನಿರ್ದೇಶಕ ಕೊಂಗವಾಡ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


ಆರ್ಥಿಕ ನೆರವಿಗೆ ರೈತರು ದಾಖಲೆ ಸಲ್ಲಿಕೆಗೆ ಆಗಸ್ಟ 15 ಕೊನೆ
ಕೋವಿಡ್-19 ಲಾಕ್‍ಡೌನ್ ಸಮಸ್ಯೆಯಿಂದ ಸಂಕಷ್ಟಕ್ಕೆ ಒಳಗಾಗಿರುವ ಮುಸುಕಿನ ಜೋಳ ಬೆಳೆದ ರೈತರಿಗೆ 5 ಸಾವಿರ ರೂ.ಗಳ ಆರ್ಥಿಕ ನೆರವು ಯೋಜನೆಯಡಿ ಜಿಲ್ಲೆಯಲ್ಲಿ ಒಟ್ಟು 12087 ಮೆಕ್ಕೆ ಜೋಳ ಬೆಳೆದ ಜಂಟಿ ಖಾತೆ ಭೂ ಹಿಡುವಳಿ ರೈತರ ಪೈಕಿ 4732 ರೈತರು ಮಾತ್ರ ಆರ್ಥಿಕ ನೆರವಿಗಾಗಿ ದಾಖಲೆ ಸಲ್ಲಿಸಿದ್ದಾರೆ. ಆದರೆ ಉಳಿದ ರೈತರು ರೈತರು ದಾಖಲಾತಿ ಸಲ್ಲಿಸಲು ಆಗಸ್ಟ 15 ಕೊನೆ ದಿನವಾಗಿದ್ದು, ರೈತರು ಕೊನೆಯ ದಿನ ಕಾಯದೇ ಇಂದೇ ದಾಖಲಾತಿ ಸಲ್ಲಿಸಿ ಆರ್ಥಿಕ ನೆರವು ಪಡೆದುಕೊಳ್ಳಿ.

ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ


Be the first to comment

Leave a Reply

Your email address will not be published.


*