ಬಾಗಲಕೋಟೆ:ಮುಧೋಳ್ ನಗರದ ಸುತ್ತಟ್ಟಿ ಗಲ್ಲಿ ವಾರ್ಡ್ ನಂ 31ರ ಸರ್ಕಾರಿ ಶಾಲೆಯಲ್ಲಿ ಸ್ಥಾಪಿಸಿರುವ ಗಂಜಿಕೇಂದ್ರಕ್ಕೆ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಭೇಟಿ ನೀಡಿ, ಅಡುಗೆಕೋಣೆ, ಆಹಾರ ಸಾಮಗ್ರಿ ಇತರ ಸೌಲಭ್ಯವನ್ನು ಪರಿಶೀಲಿಸಿದರು. ಈ ಗಂಜಿಕೇಂದ್ರದಲ್ಲಿರುವ 42 ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿದರು. ನಂತರ ಹಿಂದು ರುದ್ರಭೂಮಿ, ಯಾದವಾಡ ಬ್ರಿಡ್ಜ್ ಬಳಿಗೆ ಭೇಟಿ ನೀಡಿ, ಪ್ರವಾಹ ಪರಿಸ್ಥಿತಿ ಯನ್ನು ಪರಿಶೀಲಿಸಿದರು. ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿ, ಸುರಕ್ಷಿತ ಸ್ಥಳಗಳಲ್ಲಿ ರುವಂತೆ ಸಾರ್ವಜನಿಕರಿಗೆ ಮನವಿ ಮಾಡಿದರು.
ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಕ್ಯಾಪ್ಟನ್ ರಾಜೇಂದ್ರ, ಸಿಇಓ ಶ್ರೀ ಭೂಪಾಲನ್, ಎಸ್ ಪಿ ಶ್ರೀ ಲೋಕೇಶ್ ಜಗಲಾಸರ, ಇತರ ಅಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.
Be the first to comment