ಕಾಲ ಮಿತಿಯೊಳಗೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ : ಕಳಸದ

ವರದಿ: ಶರಣಪ್ಪ ಬಾಗಲಕೋಟೆ

ಬಾಗಲಕೋಟೆ: ಯುಕೆಪಿಯ ಭೂಸ್ವಾಧೀನಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳ್ನು ಕಾಲ ಮಿತಿಯೊಳಗೆ ತ್ವರಿತಗರಿಯಲ್ಲಿ ಇತ್ಯರ್ಥಪಡಿಸಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಆಗಿರುವ ಯುಕೆಪಿ ಆಯುಕ್ತರಾದ ಶಿವಯೋಗಿ ಕಳಸದ ಅಧಿಕಾರಿಗಳಿಗೆ ಸೂಚಿಸಿದರು.

ನವನಗರದ ಆಯುಕ್ತರ ಕಚೇರಿಯ ಸಂಗಮ ಸಭಾಭವನದಲ್ಲಿ ಜರುಗಿದ ಭೂಸ್ವಾಧೀನ ಮತ್ತು ಪುನರ್ವಸತಿ ಅಧಿಕಾರಿಗಳು ಮತ್ತು ಇಂಜಿನೀಯರ್‍ಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಭೂಸ್ವಾಧೀನ ಪ್ರಕರಣ ಮತ್ತು ಪುನರ್ ವಸತಿ, ಪುನರ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ತ್ವರಿತವಾಗಿ ಭೂಸ್ವಾಧೀನ ಪಡಿಸಿಕೊಂಡು ವಾರ್ಡಗಳನ್ನು ರಚಿಸಿ ಪ್ರಕರಣಗಳನ್ನು ಶೀಘ್ರದಲ್ಲಿಯೇ ಇತ್ಯರ್ಥ ಪಡಿಸಿಕೊಳ್ಳಲು ಸೂಚಿಸಿದರು.

ಸಭೆಯಲ್ಲಿ ಯುಕೆಪಿ ಪ್ರಧಾನ ವ್ಯವಸ್ಥಾಕರು ಹಾಗೂ ಅಪರ ಜಿಲ್ಲಾಧಿಕಾರಿಗಳಾದ ಮಹಾದೇವ ಮುರಗಿ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಅಭಿಯಂತರರು ಉಪಸ್ಥಿತರಿದ್ದರು.

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ಆತ್ಮ ಯೋಜನೆಯಡಿಯಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ “ಶ್ರೇಷ್ಠ ಕೃಷಿಕ ಪ್ರಶಸ್ತಿ”ಗೆ ವಿವಿಧ ಕೃಷಿ ಚಟುವಟಿಕೆಗಳಲ್ಲಿ ಅತ್ಯತ್ತಮ ಸಾಧನೆ ಮಾಡಿರುವ ರೈತ, ರೈತ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ಅರ್ಹ ಸಾಮಾನ್ಯ, ಪರಿಶಿಷ್ಟ ಜಾತಿ, ಹಾಗೂ ಪರಿಶಿಷ್ಟ ಪಂಗಡ ಅ ಆಸಕ್ತ ರೈತ ಮಹಿಳೆಯರು ಬದಾಮಿ, ಬಾಗಲಕೋಟ, ಬೀಳಗಿ, ಹುನಗುಂದ, ಮುಧೋಳ, ತಾಲ್ಲೂಕುಗಳ ಸಹಾಯಕ ಕೃಷಿ ನಿರ್ದೇಶಕರುಗಳ ಕಛೇರಿಗಳನ್ನು ಸಂಪರ್ಕಿಸಬಹುದು. ಅರ್ಜಿಗಳನ್ನು ಸೆಪ್ಟೆಂಬರ್ 5 ರೊಳಗಾಗಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ್ 7 ರಂದು ಸಂಜೆ 5.30 ರೊಳಗಾಗಿ ಸಂಬಂಧಿಸಿದ ತಾಲೂಕಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಅಥವಾ ರೈತ ಸಂಪರ್ಕ ಕೇಂದ್ರ ಸಂಪರ್ಕಿಸಬಹುದು ಎಂದು ಉಪ ಕೃಷಿ ನಿರ್ದೇಶಕರು ಹಾಗೂ ಯೋಜನಾ ನಿರ್ದೇಶಕರಾದ ಡಾ.ಎಸ್.ಬಿ.ಕೊಂಗವಾಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*