ಹೊಸಪೇಟೆ:ನಾಯಕನಹಟ್ಟಿಯಲ್ಲಿ ಅಲೆಮಾರಿ ಕೊರಚ ಸಮುದಾಯ ಮೂವರನ್ನು ಕೊಲೆಯನ್ನು ಮಾಡಿರುವುದನ್ನು ಖಂಡಿಸಿ ಕರ್ನಾಟಕ ಅಲೆಮಾರಿ, ಅರೆ ಅಲೆಮಾರಿ ಮತ್ತು ವಿಮುಕ್ತ ಬುಡಕಟ್ಟುಗಳ ಯುವಜನ ತಾಲೂಕು ಒಕ್ಕೂಟದ ಕಾರ್ಯಕರ್ತರು ನಗರದ ತಹಶೀಲ್ದಾರ್ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.ಚಳ್ಳಿಕೇರಿಯ ಅಲೆಮಾರಿ ಕೊರಚ ಸಮುದಾಯದ ಶೀನಪ್ಪ ಹಾಗೂ ಅವರ ಮಕ್ಕಳಾದ ಮಾರೇಶ ಮತ್ತು ಯಲ್ಲೇಶ ಅವರನ್ನು ಭೀಕರವಾಗಿ ಕೊಲೆಗೈದು ಪರಾರಿಯಾಗಿರುವ ದುಷ್ಕರ್ಮಿಗಳಿಗೆ ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು. ಕೊಲಂಹಳ್ಳಿಯಲ್ಲಿ ಹಂದಿ ಸಾಕಾಣಿಕೆ ಮಾಡಿಕೊಂಡು ಜೀವನವನ್ನು ಸಾಗಿಸುತ್ತಿದ್ದ ಶೀನಪ್ಪ ಅವರ ಮಕ್ಕಳನ್ನು ರಾತ್ರಿ ವೇಳೆ ದುಷ್ಕರ್ಮಿಗಳು ಕಾರದ ಪುಡಿ ಕಣ್ಣಿಗೆ ಎರಚಿ, ಕೊಲೆ ಪರಾರಿಯಾಗಿದ್ದಾರೆ. ಕೊಲೆ ಮಾಡಿರುವವರನ್ನು ಪತ್ತೆ ಹಚ್ಚಿ, ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು. ಅಲ್ಲದೇ, ದೌರ್ಜನ್ಯಕ್ಕೆ ಒಳಗಾದ ಕುಟುಂಬಕ್ಕೆ ಪರಿಹಾರವನ್ನು ಒದಗಿಸಬೇಕು ಎಂದು ಒತ್ತಾಯಿಸಿ. ತಾಲೂಕು ಕಚೇರಿಯ ಶಿರಸ್ತೇದಾರ್ ರಮೇಶ ಅವರಿಗೆ ಮನವಿ ಸಲ್ಲಿಸಿದರು.
ಅಲೆಮಾರಿ ಒಕ್ಕೂಟದ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾದ ಸಣ್ಣ ಮಾರೆಪ್ಪ, ಅಲೆಮಾರಿ ಒಕ್ಕೂಟದ ಯುವಮುಖಂಡರಾದ ಕೆ.ಬಸವರಾಜ, ಅಲೆಮಾರಿ ಒಕ್ಕೂಟದ ಯುವಜನ ಘಟಕದ ರಾಜ್ಯಾಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಬಿ. ಮಾನ್ಪಡೆ, ಕೊರಮ- ಕೊರಚ ಸಂಘದ ತಾಲೂಕು ಅಧ್ಯಕ್ಷರಾದ ಕೆ.ಹುಲಗಪ್ಪ ಕಮಲಾಪುರ, ಉಪಾಧ್ಯಕ್ಷರಾದ ಕೆ ತಾಯಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಕೆ ನಾಗಭೂಷಣ ಸೇರಿದಂತೆ ಹಲವಾರು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Be the first to comment