ವಿಶ್ವಕರ್ಮ ಅಭಿವೃದ್ದಿ ನಿಗಮ : ವಿವಿಧ ಸೌಲಭ್ಯಕ್ಕೆ ಅರ್ಜಿ

ವರದಿ: ಶರಣಪ್ಪ ಬಾಗಲಕೋಟೆ

ಬಾಗಲಕೋಟೆ: ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮದ ವತಿಯಿಂದ ವಿವಿಧ ಸಾಲ, ಸಹಾಯಧನ ಹಾಗೂ ಗಂಗಾ ಕಲ್ಯಾಣ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಪಂಚವೃತ್ತಿ ಅಭಿವೃಧ್ದಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ, ಬ್ಯಾಂಕ್ ಸಹಯೋಗದಲ್ಲಿ ಉದ್ಯೋಗಕ್ಕೆ ಸಾಲ ಯೋಜನೆ, ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಯೋಜನೆ, ಮಹಿಳೆಯರಿಗೆ ಮೈಕ್ರೋ ಕ್ರೇಟಿಡ್ ಸಾಲ ಯೋಜನೆಗಳ ಸೌಲಭ್ಯಗಳಿಗೆ ಜಿಲ್ಲೆಯ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದ ನಿಗಮದ ಜಿಲ್ಲಾ ವ್ಯವಸ್ಥಾಪಕ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಸೆಪ್ಟೆಂಬರ 16 ರಂದು ಸಂಜೆ 4.30 ರೊಳಗಾಗಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ದೂಸಂ.08354-236216ಗೆ ಸಂಪರ್ಕಿಸಬಹುದಾಗಿದೆ.

Be the first to comment

Leave a Reply

Your email address will not be published.


*