ರಾಜ್ಯ ಸುದ್ದಿಗಳು
ನವ ದೆಹಲಿ:
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶರಾಗಿದ್ದಾರೆ. 84 ವರ್ಷದ ಪ್ರಣಬ್ ಮುಖರ್ಜಿ ಪಶ್ಚಿಮ ಬಂಗಾಳದ ಬಿರ್ಬೂಮ್ ಜಿಲ್ಲೆಯ ಮಿರತಿಯಲ್ಲಿ ಜನಿಸಿದ್ದರು. ಕಿಂಕರ್ ಮುಖರ್ಜಿ ಹಾಗೂ ರಾಜಲಕ್ಷ್ಮೀ ದಂಪತಿಗೆ 1935ರ ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ದಾ ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು.
ಮಾಜಿ ರಾಷ್ಟ್ರಪತಿ ಪ್ರಣಬ್ರಿಗೆ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಜೊತೆಗೆ, ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಾಗಾಗಿ, ಪ್ರಣಬ್ ಮುಖರ್ಜಿ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದರು ಎಂದು ತಿಳಿದುಬಂದಿದೆ. ಮಾಜಿ ರಾಷ್ಟ್ರಪತಿ ದೆಹಲಿಯಲ್ಲಿ ಸೇನೆಯ ಆರ್ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ತಮ್ಮ ಶ್ವಾಸಕೋಶಗಳಲ್ಲಿ ತೀವ್ರ ಸೋಂಕು ಉಂಟಾದ ಪರಿಣಾಮ ಸೆಪ್ಟಿಕ್ ಶಾಕ್ಗೆ ಒಳಪಟ್ಟಿದ್ದರು ಎಂದು ತಿಳಿದುಬಂದಿದೆ.
Be the first to comment