ಜೈ ಕರ್ನಾಟಕ ಸಂಘಟನೆಯ ಹೋರಾಟಕ್ಕೆ ಡಾ॥ಬಿ.ಆರ್.ಅಂಬೇಡ್ಕರ್ ಸಾರ್ವಜನಿಕ ಸೇವಾ ಸಮಿತಿಯಿಂದ ಬೆಂಬಲ.

ವರದಿ: ಪ್ರಕಾಶ ಮಂದಾರ.

ಹರಿಹರ:ನಗರದ ಮೂಲಭೂತ ಸೌಲಭ್ಯಕ್ಕೆ ಆಗ್ರಹಿಸಿ ಜೈ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಹೋರಾಟವು ಇಂದಿಗೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು ಇಂದು ಡಾಕ್ಟರ್ ಬಿಆರ್ ಅಂಬೇಡ್ಕರ್ ಸಾರ್ವಜನಿಕ ಸೇವಾ ಸಮಿತಿಯಿಂದ ಹೋರಾಟಕ್ಕೆ ಬೆಂಬಲ ನೀಡಲಾಯಿತು .ಸಂಘಟನೆಯ ರಾಜ್ಯಾಧ್ಯಕ್ಷ ರಾದ H.ಮಲ್ಲೇಶ್ ನವರು ಹಾಗೂ ರಾಜ್ಯ ಕಾರ್ಯಾಧ್ಯಕ್ಷರಾದH.S ಕೊಟ್ರಪ್ಪ ನವರು ಜಯ ಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ಗೋವಿಂದ ಇವರಿಗೆ ಸನ್ಮಾನಿಸಿ ಅವರ ಹೋರಾಟಕ್ಕೆ ಸಂಪೂರ್ಣ ಬೆಂಬಲವನ್ನು ಘೋಷಿಸಿದರು .

ಡಾಕ್ಟರ್ ಬಿಆರ್ ಅಂಬೇಡ್ಕರ್ ಸಾರ್ವಜನಿಕ ಸೇವಾ ಸಮಿತಿಯ ರಾಜ್ಯಾಧ್ಯಕ್ಷರಾದ H.ಮಲ್ಲೇಶ್ ನಮ್ಮ ಮಾಧ್ಯಮ ಪ್ರತಿನಿಧಿಯೊಂದಿಗೆ ಜೈ ಕರ್ನಾಟಕ ಸಂಘಟನೆಯ ಹೋರಾಟ ಇಂದಿಗೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.ಆದರೆ ತಾಲೂಕಾಡಳಿತ ಮಾತ್ರ ಜೈ ಕರ್ನಾಟಕ ಸಂಘಟನೆ ಹೋರಾಟಕ್ಕೆ ಸ್ಪಂದಿಸುತ್ತಿಲ್ಲ .ತಾಲೂಕು ಆಡಳಿತದ ನಿರ್ಲಕ್ಷ್ಯ ಧೋರಣೆಯನ್ನು ನಾವು ಪ್ರಬಲವಾಗಿ ಖಂಡಿಸುತ್ತೇವೆ .ಸಂಘಟನೆ ಸಂಘಟನೆಯ ಮುಖಂಡರ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನವನ್ನು ತಾಲೂಕಾಡಳಿತ ಮಾಡುತ್ತಿದೆ.ಕನಿಷ್ಠ ಸೌಜನ್ಯಕ್ಕಾದರೂ ಸ್ಥಳಕ್ಕೆ ಆಗಮಿಸಿ ಹೋರಾಟಗಾರರ ಮನವಿಯನ್ನು ಸ್ವೀಕರಿಸಬೇಕಾಗಿತ್ತು ಎಂದು ಖಾರವಾಗಿ ಮಾತನಾಡಿದರು .ಜೈ ಕರ್ನಾಟಕ ಸಂಘಟನೆಯ ಸಾರ್ವಜನಿಕರ ಹಿತಕ್ಕಾಗಿ ಸಾರ್ವಜನಿಕರ ಒಳಿತಿಗಾಗಿ ಮೂಲಭೂತ ಸೌಲಭ್ಯಕ್ಕಾಗಿ ಆಗ್ರಹಿಸಿ ಹೋರಾಟ ಮಾಡುತ್ತಿದ್ದಾರೆ . ಕೂಡಲೇ ಮಾನ್ಯ ಜಿಲ್ಲಾಧಿಕಾರಿಗಳು ಸ್ಥಳಕ್ಕಾಗಮಿಸಿ ಹೋರಾಟಗಾರರ ಮನವಿಯನ್ನು ಸ್ವೀಕರಿಸಬೇಕು, ಇಲ್ಲವಾದರೆ ಜೈ ಕರ್ನಾಟಕ ಸಂಘಟನೆಯ ಮುಂದಿನ ಕೈಗೊಳ್ಳುವ ಉಗ್ರ ಹೋರಾಟಕ್ಕೆ ಡಾ॥ ಬಿಆರ್ ಅಂಬೇಡ್ಕರ್ ಸಾರ್ವಜನಿಕ ಸೇವಾ ಸಮಿತಿಯು ಸಂಪೂರ್ಣವಾಗಿ ಬೆಂಬಲಿಸಿ ಹೋರಾಟಕ್ಕೆ ಇಳಿಯುತ್ತದೆ ಎಂದು ಎಚ್ಚರಿಕೆ ನೀಡಿದರು .

ಸಂಘಟನೆಯ ಡಾ॥ ಬಿಆರ್ ಅಂಬೇಡ್ಕರ್ ಸೇವಾ ಸಮಿತಿಯ ಬೆಂಬಲದ ಮಾಹಿತಿಯನ್ನು ಪಡೆದ ತಾಲ್ಲೂಕು ದಂಡಾಧಿಕಾರಿಗಳು ಕೂಡಲೇ ಪ್ರತಿಭಟನಾ ನಿರತರ ಸ್ಥಳಕ್ಕೆ ಆಗಮಿಸಿ ಹೋರಾಟವನ್ನು ಕೈಬಿಡುವಂತೆ ಮನವಿ ಮಾಡಿಕೊಂಡರು.ಇನ್ನು ಎರಡು ದಿನದಲ್ಲಿ ತುರ್ತು ಸಭೆಯನ್ನು ಕರೆದು ತಾಲೂಕು ಅಭಿವೃದ್ಧಿಯ ಬಗ್ಗೆ ಚರ್ಚಿಸುವುದಾಗಿ ಭರವಸೆ ನೀಡಿದ್ದರು ಆದರೆ ಜಯ ಕರ್ನಾಟಕ ಸಂಘಟನೆಯವರು ಜಿಲ್ಲಾಧಿಕಾರಿಗಳು ಬಂದು ಮನವಿ ಸ್ವೀಕರಿಸುವವರೆಗೂ ತಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ಬಿಗಿಪಟ್ಟು ಹಿಡಿದರು .

ತಾಲ್ಲೂಕು ದಂಡಾಧಿಕಾರಿಗಳಾದ ಕೆಬಿ ರಾಮಚಂದ್ರಪ್ಪನವರು ಜೈ ಕರ್ನಾಟಕ ಸಂಘಟನೆಯ ತಾಲ್ಲೂಕು ಅಧ್ಯಕ್ಷರ ಮನವಿಯನ್ನು ಸ್ವೀಕರಿಸಿ ಜಿಲ್ಲಾಧಿಕಾರಿಗಳ ಗಮನಕ್ಕೆ ತರುವ ಭರವಸೆಯನ್ನು ನೀಡಿ ಸ್ಥಳದಿಂದ ಕಾಲ್ಕಿತ್ತರು .

ಈ ಸಂದರ್ಭದಲ್ಲಿ ಡಿಎಸ್ಎಸ್ ತಾಲ್ಲೂಕು ಸಂಚಾಲಕರಾದ ಆರ್ ಶ್ರೀನಿವಾಸ್ .ಡಾ॥ ಬಿಆರ್ ಅಂಬೇಡ್ಕರ್ ಸೇವಾ ಸಮಿತಿಯ ಕಾರ್ಯದರ್ಶಿ ಅಣ್ಣಪ್ಪ ಅಜ್ಜೆರ್, ಹನುಮಂತಪ್ಪ ,ರವಿಚಂದ್ರ,ಶ್ರೀನಿವಾಸ,ಯಮನೂರ್,ಶೇಖಅಹಮದ್ ,ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*