ರಾಜ್ಯಸುದ್ದಿಗಳು
ಬೆಂಗಳೂರು ಸೆ.11:
ಸ್ಯಾಂಡಲವುಡ್ ನೊಂದಿಗೆ ಸಂಟಿರುವ ಬೃಹತ್ ಡ್ರಗ್ಸ್ ಜಾಲವನ್ನು ಎನ್.ಸಿ.ಬಿ. ಅಧಿಕಾರಿಗಳು ಭೇದಿಸಿದ್ದು ಕೂಡಲೇ ಇಂತಹ ದಂಧೆಯಲ್ಲಿ ತೊಡಗಿಕೊಂಡಿರುವ ಎಲ್ಲರನ್ನೂ ಬಂಧಿಸಿ ಅವರ ವಿರುದ್ಧ ದೇಶದ್ರೋಹ ಪ್ರಕರಣವನ್ನು ದಾಖಲಿಸಬೇಕು ಹಾಗೂ ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿ ಮಾಡಬೇಕೆಂದು ಆಗ್ರಹಿಸಿ ಶುಕ್ರವಾರ ಬೆಂಗಳೂರಿನ ಯಲಹಂಕದಲ್ಲಿ ಎ.ಬಿ.ವ್ಹಿ.ಪಿ ಕಾರ್ಯಕರ್ತರು ಪ್ರತಿಭಟಿಸಿ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.
ಈಗಾಗಲೇ ಬೇಧಿಸಿರುವ ಡ್ರಗ್ಸ್ ಜಾಲದಲ್ಲಿ ಸಿನಿಮಾ ನಟ ನಟಿಯರು, ರಾಜಕಾರಣಿ ಮಕ್ಕಳು ಸೇರಿದಂತೆ ಸಮಾಜದ ಪ್ರಭಾವಿ ವ್ಯಕ್ತಿಗಳಿದ್ದಾರೆ ಎಂಬ ಮಾಹಿತಿಗಳು ಮಾದ್ಯಮದ ಮೂಲಕ ತಿಳಿಯುತ್ತಿದೆ. ಇಂತಹ ದಂಧೆಯಲ್ಲಿ ಇಂತಹ ವ್ಯಕ್ತಿಗಳು ಇರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ. ಆದರೆ ದೇಶದ ಹಿತದೃಷ್ಠಿಗಾಗಿ ಹಾಗೂ ದೇಶದ ಯುವ ಶಕ್ತಿಯನ್ನು ರಕ್ಷಿಸಿಕೊಳ್ಳಲು ಡ್ರಗ್ಸ್ ಜಾಲವನ್ನು ಸಂಪೂರ್ಣವಾಗಿ ಬುಡಸಮೇತ ಕಿತ್ತು ಹಾಕುವ ಕೆಲಸ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಮಾಡಬೇಕಿದೆ ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.
ರಾಜ್ಯದ ಹಲವು ಶಾಲಾ ಕಾಲೇಜುಗಳಲ್ಲಿ ಡ್ರಗ್ಸ್ ಜಾಲ ವ್ಯವಸ್ಥಿತವಾಗಿ ಕೋಡ್ ವೆರ್ಡ್ ಗಳ ಮೂಲಕ ನಡೆಸಲಾಗುತ್ತಿದೆ. ಇಂದಿನ ದಿನಗಳಲ್ಲಿ ಡ್ರಗ್ಸ್ ಸೇವೆನೆ ಫ್ಯಾಶನ್ ಆಗಿ ಮಾರ್ಪಡುತ್ತಿರುವ ಅಂಶವೂ ಬಯಲಾಗುತ್ತಿದೆ. ಇದರಿಂದ ಇಡೀ ಕಾಲೇಜುಗಳೇ ಡ್ರಗ್ಸ್ ಅಡಿಕ್ಟ್ ಆಗುವುದು ನಿಶ್ಚಿತವಾಗಿದೆ. ಇದರ ಬಗ್ಗೆ ವಿದ್ಯಾರ್ಥಿಗಳ ಪಾಲಕರೂ ಎಚ್ಚರಿಕೆಯಿಂದ ಇಟ್ಟು ತಮ್ಮ ಮಕ್ಕಳ ಚಟುವಟಿಕೆಗಳತ್ತ ಗಮನ ಹರಿಸಿರಿದರೆ ಸೂಕ್ತವಾಗುತ್ತದೆ. ಅಲ್ಲದೇ ಬೆಂಗಳೂರಿನ ಡ್ರಗ್ಸ್ ಪ್ರಕರಣದಲ್ಲಿ ಪೊಲೀಸ್ ಇಲಾಖೆ ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಿ ಜಾಲದಲ್ಲಿ ಪ್ರಭಾವಿಗಳನ್ನು ಪಾಲಾರಾಗಲು ಹಸ್ತಕ್ಷೇಪ ಮಾಡುವ ಯಾವುದೇ ಒತ್ತಡಕ್ಕೂ ಬಗ್ಗದೆ ಗೃಹ ಹಾಗೂ ಪೊಲೀಸ್ ಇಲಾಖೆಗೆ ಸಂಪೂರ್ಣ ಸ್ವಾತಂತ್ರ ನೀಡಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಸರಕಾರಕ್ಕೆ ಮನವಿಯಲ್ಲಿ ಆಗ್ರಹಿಸಿದೆ.
ಸಹಿ ಸಂಗ್ರಹಣೆ:
ರಾಜ್ಯದಲ್ಲಿ ಪತ್ತೆಯಾಗಿರುವ ಡ್ರಗ್ಸ್ ಜಾಲದಲ್ಲಿ ಬಂಧಿತರ ವಿರುದ್ಧ ದೇಶದ್ರೋಹಿ ಪ್ರಕರಣ ದಾಖಲಿಸಿ ತಕ್ಷಣವೇ ಶಿಕ್ಷಗೆ ಒಳಪಡಿಸಬೇಕೆಂದು ಎ.ಬಿ.ವ್ಹಿ.ಪಿ. ಸಾರ್ವಜನಿಕವಾಗಿ ಸಹಿ ಸಂಗ್ರಹ ಮಾಡಲಾಯಿತು. ಈ ವಿನೂತನ ಪ್ರತಿಭಟನೆಗೆ ಸಾವಿರಾರು ಜನರು ತಮ್ಮ ಸಹಿಗಳನ್ನು ಹಾಕುವ ಮೂಲಕ ಪ್ರತಿಭಟನೆಗೆ ಬೆಂಬಲ ಸೂಚಿಸಿದರು.
ಯಲಹಂತ ತಾಲೂಕಿನ ದಂಡಾಧಿಕಾರಿಗಳು ಮನವಿಯನ್ನು ಸ್ವೀಕರಿಸಿ ಮೇಲಾಧಿಕಾರಿಗಳ ಗಮನಕ್ಕೆ ಕಳುಹಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಯಲಹಂತ ವಿಭಾಗ ಎಬಿವ್ಹಿಪಿ ಸಂಚಾಲಕ ಧುವನಗೌಡ, ಪ್ರಮುಖರಾದ ವೇಕಟೇಶ್, ಕಾರ್ತಿಕ್, ಲಕ್ಮಿನಾರಾಯಣ, ಚರಣ, ಪ್ರೇಮ್, ಪುರುಷೋತ್ತಮ, ಚೈತ್ರಾ ಸೇರಿದಂತೆ ವಿವಿಧ ಕಾಲೇಜು ವಿದ್ಯಾರ್ಥಿಗಳು ಇದ್ದರು.
Be the first to comment