ಸರ್ಕಾರಿ ನೌಕರರ ದಿನಾಚರಣೆಗೆ ಸ್ಪಂಧಿಸಿದ ಸರ್ಕಾರ: ಇಲಕಲ್ಲ ತಾಲೂಕಾ ನೌಕರರ ಸಂಘದಿಂದ ಅಭಿನಂದನೆ

ವರದಿ: ಶರಣಪ್ಪ ಬಾಗಲಕೋಟೆ

ಬಾಗಲಕೋಟೆ:ಪ್ರತಿ ವರ್ಷ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಆಚರಿಸುವ ಸಂಬಂಧ ವಿವರವಾದ ಪ್ರಸ್ಥಾವನೆಯನ್ನು ಕೂಡಲೇ ಸಿದ್ದಪಡಿಸಿ ಮಂಡಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಗೆ ಸಿಎಂ ಯಡಿಯೂರಪ್ಪ ಸೂಚಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರನ್ನು ಪ್ರೋತ್ಸಾಹಿಸುವ ಹಾಗೂ ಕರ್ತವ್ಯದಲ್ಲಿ ಒತ್ತಡ ನಿವಾರಿಸಿ ಕ್ರೀಯಾಶೀಲತೆ ಮೂಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನು ಪ್ರತಿ ವರ್ಷ ಒಂದು ನಿಗದಿತ ದಿನಾಂಕದಂದು ಸರ್ಕಾರದವತಿಯಿಂದ ಆಚರಿಸಿ , ಆ ದಿನದಂದು ಅಪ್ರತಿಮ ಸಾಧನೆಗೈದ ರಾಜ್ಯ ಸರ್ಕಾರಿ ನೌಕರರಿಗೆ ನೀಡುತ್ತಿರುವ ‘ಸರ್ವೋತ್ತಮ ಸೇವಾ ಪ್ರಶಸ್ತಿ’ ಪ್ರಧಾನ ಮಾಡುವುದು ಸೂಕ್ತವೆಂಬುದು ರಾಜ್ಯ ನೌಕರರ ಸಂಘವು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ನೌಕರರನ್ನೊಳಗೊಂಡಂತೆ ಸರ್ಕಾರಿ ನೌಕರರ ದಿನಾಚರಣೆಯನ್ನು ಆಚರಿಸುವ ಕುರಿತು ಪ್ರಸ್ಥಾವನೆ ಸಲ್ಲಿಸಲು ತಿಳಿಸಿದ ಪ್ರಯುಕ್ತ ಇಲಕಲ್ಲ ತಾಲೂಕಾ ನೌಕರರ ಸಂಘದ ಅಧ್ಯಕ್ಷ ಪರಶುರಾಮ ಪಮ್ಮಾರ, ಈಶ್ವರ ಗಡ್ಡಿ ರಾಜ್ಯ ಪರಿಷತ್ ಸದಸ್ಯರು,
ಮಹಾಂತಗೌಡ ಗೌಡರ ಖಜಾಂಚಿ, ಗುಂಡಪ್ಪ ಕುರಿ
ಕಾರ್ಯದರ್ಶಿ ಹಾಗೂ ಎಲ್ಲ ಪದಾಧಿಕಾರಿಗಳು ಸಿಎಂ ಯಡಿಯೂರಪ್ಪ ನವರಿಗೂ ಮತ್ತು ರಾಜ್ಯ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್.ಷಡಕ್ಷರಿಯವರಿಗೂ  ಹಾಗೂ ರಾಜ್ಯದ ಎಲ್ಲಾ ಪದಾಧಿಕಾರಿಗಳಿಗೂ ಅಭಿನಂದನೆಗಳನ್ನು ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*