ಬೆಂಗಳೂರು: ಬಸವ ಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಕೊರೋನಾ ಸೋಂಕಿಗೆ ತುತ್ತಾಗಿರೋ ನಾರಾಯಣರಾವ್, ನಗರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೋವಿಡ್ ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಸಹಾಯದಿಂದ ಅವರಿಗೆ ಚಿಕಿತ್ಸೆ ಕೊಡಲಾಗ್ತಿದೆ.
66 ವರ್ಷ ವಯಸ್ಸಿನ ನಾರಾಯಣರಾವ್, ಮೈತ್ರಿ ಸರ್ಕಾರದ ವೇಳೆ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದರು. ನಿನ್ನೆಯಷ್ಟೇ ವಿಪಕ್ಷ ನಾಯಕ ಸಿದ್ದರಾಮಯ್ಯ ವಿಧಾನಸಭೆ ಅಧಿವೇಶನದಲ್ಲಿ ಕೋವಿಡ್ ಚರ್ಚೆ ಆರಂಭದಲ್ಲೇ ನಾರಾಯಣರಾವ್ ಆರೋಗ್ಯ ಸ್ಥಿತಿಯ ಬಗ್ಗೆ ಆತಂಕ ವ್ಯಕ್ತಪಡಿಸಿದ್ದರು.
ಇಂದು ನಾರಾಯಣರಾವ್ ಅವರ ಆರೋಗ್ಯ ಚಿಂತಾಜನಕ ಸ್ಥಿತಿ ತಲುಪಿದೆ ಎಂದು ಮಣಿಪಾಲ್ ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ.
Be the first to comment