ಜಿಲ್ಲೆಯ ಎರಡು ಪ್ರಮುಖ ನದಿಗಳಾದ ಕೃಷ್ಣಾ ಮತ್ತು ಭೀಮಾ ನದಿಗಳು ಉಕ್ಕಿ ಹರಿಯುತ್ತಿದ್ದು, ನದಿ ತೀರದ ಜನರಲ್ಲಿ ಪ್ರವಾಹದ ಆತಂಕ ಎದುರಾಗಿದೆ.
ಜಿಲ್ಲೆಯ ಕೃಷ್ಣಾ ನದಿ ಪಾತ್ರದ ಜನರಲ್ಲಿ ಈಗ ಮತ್ತೆ ಪ್ರವಾಹ ಭೀತಿ ಎದುರಾಗಿದೆ. ಸತತವಾಗಿ ಸುರಿಯುತ್ತಿರುವ ಮಹಾ ಮಳೆ ಹಿನ್ನೆಲೆ ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿ , ನದಿ ಅಪಾಯದಮಟ್ಟ ಮೀರಿ ಹರಿಯುತ್ತಿದೆ.
ಕೃಷ್ಣಾ ನದಿ ಪಾತ್ರದ ಜನರಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದ್ದು ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿ ಇರುವ ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಒಳಹರಿವು ಹೆಚ್ಚಾಗಿದ್ದರಿಂದ ಅನಿವಾರ್ಯವಾಗಿ ನದಿಗೆ 1 ಲಕ್ಷ 63 ಸಾವಿರ ಕ್ಯೂಸೆಕ್ ಗೂ ಅಧಿಕ ನೀರು ಹೊರಬಿಡಲಾಗಿದೆ. ಒಟ್ಟು 33.313 ಟಿಎಂಸಿ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲೀಗ 31.05 ಟಿಎಂಸಿ ನೀರು ಸಂಗ್ರಹವಾಗಿದೆ. 492.25 ಮೀಟರ್ ನಷ್ಟು ನೀರಿನ ಮಟ್ಟ ಸಾಮರ್ಥ್ಯ ಹೊಂದಿದ ಜಲಾಶಯದಲ್ಲಿ 491.76 ಮೀಟರ್ ನೀರು ಭರ್ತಿ ಆಗಿದೆ. ಜಲಾಶಯದ ಒಳಹರಿವು 1 ಲಕ್ಷ 20 ಸಾವಿರ ಕ್ಯೂಸೆಕ್ ಇದ್ದು, ಸಧ್ಯ ಜಲಾಶಯದ 22 ಗೇಟ್ ತೆರೆಯುವ ಮೂಲಕ ನದಿಗೆ ಹೆಚ್ಚಿನ ಪ್ರಮಾಣದ ಮಾಹಿತಿ ನೀಡಿದ್ದಾರೆ.ಜಿಲ್ಲೆಯ ಎರಡು ಪ್ರಮುಖ ನದಿಗಳಾದ ಕೃಷ್ಣಾ ಮತ್ತು ಭೀಮಾ ನದಿಗಳು ಉಕ್ಕಿ ಹರಿಯುತ್ತಿದ್ದು, ನದಿ ತೀರದ ಜನರಲ್ಲಿ ಪ್ರವಾಹ ಆತಂಕ ಎದುರಾಗಿದೆ. ನದಿ ಪಾತ್ರದಲ್ಲಿ ಜನ, ಜಾನುವಾರುಗಳು ತೆರಳದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
Be the first to comment