ಕುಮಾರಸ್ವಾಮಿಗೆ ಮತ್ತೊಂದು ಸಂಕಷ್ಟ. ಕೋರ್ಟ್ ಗೆ ಹಾಜರಾಗಲು ಸೂಚನೆ..

ಕುಮಾರಸ್ವಾಮಿಗೆ ಮತ್ತೊಂದು ಸಂಕಷ್ಟ. ಕೋರ್ಟ್ ಗೆ ಹಾಜರಾಗಲು ಸೂಚನೆ..

  ಬಹುತೇಕ ರಾಜ್ಯ ಸರ್ಕಾರ ಇನ್ನೇನು ಪತನದ ಅಂಚಿಗೆ ಬಂದು ನಿಂತಿದೆ. ಒಂದು ವರ್ಷದಿಂದ ರಾಜ್ಯದಲ್ಲಿದ್ದಂತಹ ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರ ಬಹುಮತವನ್ನು ಕಳೆದುಕೊಂಡು ಅಲ್ಪಮತಕ್ಕೆ ಕುಸಿದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅಧಿಕಾರವನ್ನು ಕಳೆದುಕೊಳ್ಳುವುದರ ಸನಿಹ ಬಂದು ನಿಂತಿದ್ದಾರೆ.

ಇದೇ ವೇಳೆ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಮತ್ತೊಂದು ಆಘಾತ ಎದುರಾಗಿದ್ದು, ಬೆಂಗಳೂರಿನ ವಿಶೇಷ ನ್ಯಾಯಾಲಯ ಇದೇ 26 ಕ್ಕೆ ವಿಚಾರಣೆಗೆ ಹಾಜರಾಗುವಂತೆ ಆದೇಶ ನೀಡಿದೆ. 2.24 ಗುಂಟೆ ಭೂಮಿಯ ಡಿನೋಟಿಫಿಕೇಷನ್ ಕೇಸ್ ನಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯ ಈ ಮಹತ್ವದ ಆದೇಶವನ್ನು ನೀಡಿದೆ. ಬೆಂಗಳೂರು ಹೊರವಲಯದಲ್ಲಿರುವ ಹಲಗೆವಡೇರ ಹಳ್ಳಿಯಲ್ಲಿರುವ ಜಮೀನಿನ ಡಿನೋಟಿಫಿಕೇಷನ್ ಗೆ ಸಂಬಂಧಿಸಿದಂತೆ ಈ ತೀರ್ಪು ಬಂದಿದೆ.

 

2018 ರ ಡಿಸೆಂಬರ್ ನಲ್ಲಿ ಲೋಕಾಯುಕ್ತ ಸಂಸ್ಥೆ ಬಿ-ರಿಪೋರ್ಟ್ ಅನ್ನು ಈ ಪ್ರಕರಣದಲ್ಲಿ ತನಿಖೆ ಮಾಡಿ ನೀಡಿತ್ತು. ಆದರೆ ಆ ರಿಪೋರ್ಟ್ ಅನ್ನು

ನ್ಯಾಯಾಲಯ ತಿರಸ್ಕರಿಸಿದೆ. ಬಿ ರಿಪೋರ್ಟ್ ಪ್ರಶ್ನಿಸಿ ವಿಶೇಷ ನ್ಯಾಯಾಲಯಕ್ಕೆ ಮಹಾದೇವಸ್ವಾಮಿ ಎನ್ನುವವರು ಮೇಲ್ಮನವಿಯನ್ನು ಸಲ್ಲಿಸಿದ್ದರು. ಎಚ್ ಡಿ ಕುಮಾರಸ್ವಾಮಿ ಅವರು ಈ ಹಿಂದೆ 20-20 ಸರ್ಕಾರದ ವೇಳೆ ಮುಖ್ಯಮಂತ್ರಿಯಾಗಿದ್ದಾಗ ಈ ಡಿನೋಟಿಫಿಕೇಷನ್ ನನ್ನು ಮಾಡಿದ್ದರು. ಅಧಿಕಾರವನ್ನು ಕಳೆದುಕೊಳ್ಳುವ ಭೀತಿಯಲ್ಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಇದೀಗ ಡಿನೋಟಿಫಿಕೇಷನ್ ಭೂತ ಬೆನ್ನು ಬಿದ್ದಿದ್ದು, ಇದರಿಂದ ಕುಮಾರಸ್ವಾಮಿ ಅವರು ಹೇಗೆ ಪಾರಾಗುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Be the first to comment

Leave a Reply

Your email address will not be published.


*