ಬಾಗಲಕೋಟೆ: ನವನಗರದ ಎಸ್.ಬಿ.ಐ ಬ್ಯಾಂಕ್, ಪೆಟ್ರೋಲ್ ಬಂಕ್ ಹತ್ತಿರ ಹಾಗೂ ಇತರೆ ಸ್ಥಳಗಳಲ್ಲಿ ಸಾರ್ವಜನಿಕರಿಗೆ ಮಾಸ್ಕ್ ವಿತರಿಸುವ ಮೂಲಕ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕಲ್ಪನಾ ಕುಲಕರ್ಣಿ ಕೋವಿಡ್-19 ಕುರಿತು ಜಾಗೃತಿ ಮೂಡಿಸಿದರು.
ಶುಕ್ರವಾರ ಜಿಲ್ಲಾ ನ್ಯಾಯಾಲಯ, ಆರೋಗ್ಯ ಇಲಾಖೆ, ಪೊಲೀಸ್ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಕೋವಿಡ್-19 ಜಾಗೃತಿ ಅಭಿಯಾನದ ಅಂಗವಾಗಿ ಹಮ್ಮಿಕೊಂಡು ಜಾಗೃತಿ ಕಾರ್ಯಕ್ರಮದಲ್ಲಿ ಮಾಸ್ಕ್ ಹಾಕಿಕೊಳ್ಳದೇ ಸಂಚಿರಿಸುವತ್ತಿರುವ ಸಾರ್ವಜನಿಕರಿಗೆ ಮಾಸ್ಕ್‍ಗಳನ್ನು ವಿತರಿಸಿ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕರಪತ್ರಗಳನ್ನು ಸಹ ಹಂಚಲಾಯಿತು. ರಸ್ತೆಗಳಲ್ಲಿ ಮಾಸ್ಕ್ ಧರಿಸದೇ ನಡೆದಾಡುತ್ತಿರುವ ವೃದ್ದರಿಗೆ, ಮಕ್ಕಳಿಗೆ ಹಾಗೂ ಆಟೋ ಹಾಗೂ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುತ್ತಿರುವ ಸಾರ್ವಜನಿಕರಿಗೆ ಮಾಸ್ಕ್‍ಗಳನ್ನು ವಿತರಿಸಿ, ಹೊರಗಡೆ ಹೋಗುವಾಗ ಕಡ್ಡಾಯವಾಗಿ ಮಾಸ್ಕ್‍ಗಳನ್ನು ಧರಿಸುವಂತೆ ಹಾಗೂ ಮುಂಜಾಗೃತಾ ಕ್ರಮಗಳ ಬಗ್ಗೆ ಅರಿವು ಮೂಡಿಸಲಾಯಿತು.
ಕೋವಿಡ್-19 ಅರಿವು ಕಾರ್ಯಕ್ರಮದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ, ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಬಿ.ಜಿ.ಹುಬ್ಬಳ್ಳಿ, ಸಹಾಯಕ ಸರಕಾರಿ ಅಭಿಯೋಜಕಿ ಶಾರದಾ ಬದಾಮಿ, ನಗರಸಭೆ ಪೌರಾಯುಕ್ತ ಮುನಿಷಾಮಪ್ಪ, ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿ ಎಂ.ಎಚ್.ಕಡಕೋಳ ಸೇರಿದಂತೆ ಪೊಲೀಸ್ ಅಧಿಕಾರಿಗಳು, ಪ್ಯಾಲೆನ್ ಅಡ್ವೋಕೇಟ, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
Be the first to comment