ವಿಶ್ವ ಏಡ್ಸ್ ದಿನಾಚರಣೆ-2020: ಜಿಲ್ಲೆಯ ಡಿಎಪಿಸಿಯು, ಐಸಿಟಿಸಿ ರಾಜ್ಯ ಮಟ್ಟಕ್ಕೆ ಆಯ್ಕೆ

ಬಾಗಲಕೋಟೆ:ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ ಹಾಗೂ ಜಮಖಂಡಿ ಉಪವಿಭಾಗೀಯ ಆಸ್ಪತ್ರೆಯ ಐಸಿಟಿಸಿ ಕೇಂದ್ರವು ರಾಜ್ಯ ಮಟ್ಟದಲ್ಲಿ ನಡೆಯುವ ವಿಶ್ವ ಏಡ್ಸ್ ದಿನಾಚರಣೆ-2020 ಸನ್ಮಾನಕ್ಕೆ ಆಯ್ಕೆಯಾಗಿವೆ.

ಕಳೆದ ಸಾಲಿನಲ್ಲಿ ಉತ್ತಮ ಸೇವೆಯನ್ನು ಸಲ್ಲಿಸಿರುವವರನ್ನು ವಿಶ್ವ ಏಡ್ಸ್ ದಿನಾಚರಣೆ ಸಮಾರಂಭದಲ್ಲಿ ಸನ್ಮಾನಿಸಲು ವಿವಿಧ ವಿಭಾಗಗಳಿಂದ ಕಾರ್ಯನಿರ್ವಹಣೆಯ ಬಗ್ಗೆ ವಿವರ ಸಲ್ಲಿಸಲು ತಿಳಿಸಲಾಗಿತ್ತು. ಅದರಂತೆ ಬಾಗಲಕೋಟೆ ಜಿಲ್ಲಾ ಘಟಕದ ಉತ್ತಮ ಕಾರ್ಯನಿರ್ವಹಣೆಗೆ ಮೂಲ ಸೌಕರ್ಯ ವಿಭಾಗದಲ್ಲಿ ಬಾಗಲಕೋಟೆ ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕವನ್ನು ಆಯ್ಕೆಯಾಗಿದೆ. ಅದರಂತೆ ಆಪ್ತ ಸಮಾಲೋಚನೆ ಮತ್ತು ಪರೀಕ್ಷಾ ಕೇಂದ್ರಗಳ ವಿಭಾಗದಲ್ಲಿ ಜಮಖಂಡಿ ಉಪವಿಭಾಗೀಯ ಆಸ್ಪತ್ರೆಯಲ್ಲಿರುವ ಐ.ಸಿ.ಟಿಸಿ ಕೇಂದ್ರ ಆಯ್ಕೆಯಾಗಿರುತ್ತವೆ.
       ರಾಜ್ಯ ಮಟ್ಟದ ಸನ್ಮಾನಕ್ಕೆ ಆಯ್ಕೆಯಾದ ಬಾಗಲಕೋಟೆ ಡಿಎಪಿಸಿಯು ಮತ್ತು ಜಮಖಂಡಿಯ ಐಸಿಟಿಸಿ ಕೇಂದ್ರದ ಉತ್ತಮ ಸಾಧನೆಗೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿ.ಪಂ ಸಿಇಓ ಟಿ.ಭೂಬಾಲನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ ಅಭಿನಂದಿಸಿದ್ದಾರೆ.

Be the first to comment

Leave a Reply

Your email address will not be published.


*