ಜಿಲ್ಲಾ ಸುದ್ದಿಗಳು
ಮುದ್ದೇಬಿಹಾಳ ಡಿ.2:
ಕರ್ನಾಟಕ ರಾಜ್ಯ ಚುನಾವಣೆ ಆಯೋಗ ಈಗಾಗಲೇ ಗ್ರಾಮ ಪಂಚಾಯತ ಚುನಾವಣೆ ದಿನಾಂಕ ಘೋಷಣೆಮಾಡಿದ್ದು ಚುನಾವಣೆಗಾಗಿ ತುರ್ತುಪ್ರತ್ಯೇಕ ಕೌಂಟರ್ ಪ್ರಾರಂಭಿಸುವುದರ ಜೊತೆಗೆ ಸೂಕ್ತ ತರಬೇತಿ ಹೊಂದಿದ ಅಧಿಕಾರಿಗಳನ್ನು ನೇಮಿಸಬೇಕು ಎಂದು ಜೆಡಿಎಸ್ ಪಕ್ಷದ ತಾಲೂಕಾಧ್ಯಕ್ಷ ಪ್ರಭುಗೌಡ ಪಾಟೀಲ ಜಿಲ್ಲಾಧಿಕಾರಿಗಳಿಗೆ ಬುಧವಾರ ಮನವಿ ಸಲ್ಲಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಚುನಾವಣೆಯಲ್ಲಿ ಗ್ರಾಮ ಪಂಚಾಯತಿ ಚುನಾವಣೆಯು ಅತ್ಯಂತ ತರಾತುರಿಯಲ್ಲಿ ನಡೆಯುತ್ತವೆ. ಇದಕ್ಕೆ ಸ್ಪರ್ಧಿಸಲು ಅಭ್ಯರ್ಥಿಗಳು ವಿವಿಧ ಪ್ರಮಾಣ ಪತ್ರಕ್ಕಾಗಿ ಅಲೇದಾಡುತ್ತಾರೆ. ಆದರೆ ಇಂತಹ ಸಂದರ್ಭದಲ್ಲಿ ಜಿಲ್ಲೆಯ ಪ್ರತಿಯೊಂದು ತಹಸೀಲ್ದಾರ ಕಾರ್ಯಾಲಯದಲ್ಲಿ ಪ್ರತ್ಯೇಕವಾಗಿ ಕೌಂಟರ್ ಇಟ್ಟು ಚುನಾಚಣಾ ಅಭ್ಯರ್ಥಿಗಳಿಗೆ ತುರ್ತುತಾಗಿ ಜಾತಿ ಪ್ರಮಾಣ ಪತ್ರ ಸೇರಿದಂತೆ ಇನ್ನಿತರ ಪ್ರಮಾಣ ಪತ್ರಗಳನ್ನು ಪಡೆದುಕೊಳ್ಳುವಂತೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
Be the first to comment